image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ವಸತಿ ರಹಿತರಿಗೆ ಸೂರು ಕೊಡಲಾಗುವುದು : ಸಚಿವ ಜಮೀರ್ ಅಹ್ಮದ್

ವಸತಿ ರಹಿತರಿಗೆ ಸೂರು ಕೊಡಲಾಗುವುದು : ಸಚಿವ ಜಮೀರ್ ಅಹ್ಮದ್

ವಿಜಯನಗರ: "ನಾಡಿನಲ್ಲಿ ಆಚರಿಸುವ ಯುಗಾದಿ, ದೀಪಾವಳಿ, ಕ್ರಿಸ್ಮಸ್ ಸೇರಿದಂತೆ ಎಲ್ಲಾ ಹಬ್ಬಗಳಿಗಿಂತ ಕರ್ನಾಟಕ ರಾಜ್ಯೋತ್ಸವ ಹಬ್ಬವೇ ವಿಶೇಷ. ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಎಲ್ಲಾ ಸಮಾಜದವರು ಭಾವೈಕ್ಯತೆಯಿಂದ ರಾಜ್ಯವನ್ನು ಮುನ್ನಡೆಸಲಾಗುತ್ತಿದೆ" ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. 

ಅವರು ಹೊಸಪೇಟೆ ಪುನೀತ್ ರಾಜಕುಮಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥಸಂಚಲನದಲ್ಲಿ ಭಾಗವಹಿಸಿದ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ತಮ್ಮ ರಾಜ್ಯೋತ್ಸವ ಸಂದೇಶದಲ್ಲಿ ಮಾತನಾಡಿ,

"ಚುನಾವಣೆ ವೇಳೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಅದರಂತೆ ಐದೂ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿ ಅನುಷ್ಠಾನ ಮಾಡಲಾಗಿದೆ. ನಾವು ಆರನೇ ಗ್ಯಾರಂಟಿ ಘೋಷಣೆ ಮಾಡಿಲ್ಲ. ಆದರೆ, ಅದು ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ. ಸ್ಲಂ ಬೋರ್ಡ್​ನಿಂದ 1,80,253 ಮನೆಗಳು ಮತ್ತು ರಾಜೀವ ಗಾಂಧಿ ವಸತಿ ನಿಗಮದಿಂದ 47,860 ಮನೆಗಳು ಸೇರಿ 20,30,900 ಮನೆಗಳನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿ. ಇವುಗಳು ಕಾರಣಾಂತರದಿಂದ ಹಂಚಿಕೆಯಾಗಲಿಲ್ಲ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮಂಜೂರು ಮಾಡಲಾಗುತ್ತದೆ".

"ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ ಕಳೆದ ಫೆಬ್ರವರಿಯಲ್ಲಿ 36,799 ಮನೆಗಳನ್ನು ನೀಡಿ ಇದಕ್ಕಾಗಿ ರೂ. 500 ಕೋಟಿ ಬಿಡುಗಡೆ ಮಾಡಲಾಗಿತ್ತು. ಬರುವ ಒಂದು ತಿಂಗಳಲ್ಲಿ ಮತ್ತೆ 38,000 ಮನೆಗಳನ್ನು ನೀಡುವ ಮೂಲಕ ವಸತಿ ರಹಿತರಿಗೆ ಸೂರು ಕಲ್ಪಿಸಲಾಗುತ್ತದೆ ಎಂದರು. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳಾಗಿದ್ದು ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತವಾಗುವುದಿಲ್ಲ. ಈ ಯೋಜನೆಗಳಿಂದ ಜನರಿಗೆ ಸಾಕಷ್ಟು ಅನುಕೂಲವಾಗಿದ್ದು ಆರ್ಥಿಕ ಮಟ್ಟ ಸುಧಾರಣೆಯಾಗಿದೆ" ಎಂದರು.

Category
ಕರಾವಳಿ ತರಂಗಿಣಿ