image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡರೆ, ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸಲಾಗದು : ಹೈಕೋರ್ಟ್

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡರೆ, ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸಲಾಗದು : ಹೈಕೋರ್ಟ್

ಬೆಂಗಳೂರು: ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪತಿಯ ಆತ್ಮಹತ್ಯೆಗೆ ಪ್ರಚೋದಿಸಿದ ಅಪರಾಧದಡಿ ತಮಗೆ ಶಿಕ್ಷೆ ವಿಧಿಸಿದ ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿವಾಸಿಗಳಾದ ಪ್ರೇಮಾ ಮತ್ತು ಬಸವಲಿಂಗೇ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರ ಪೀಠ ಈ ಆದೇಶ ಮಾಡಿದೆ.

ಅಲ್ಲದೆ, ನಿರ್ದಿಷ್ಟ ಕೆಲಸವನ್ನು ಮಾಡುವಂತೆ ಪ್ರಚೋದನೆ ನೀಡುವುದನ್ನು ಪ್ರಚೋದನೆ ಎನ್ನಲಾಗುತ್ತದೆ. ಆಗ ಮಾತ್ರ ಅದು ಪ್ರಚೋದನೆ ಅಪರಾಧವಾಗುತ್ತದೆ. ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಅಕ್ರಮ ಸಂಬಂಧ ಹೊಂದಿರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ. ವ್ಯಕ್ತಿ ಆತ್ಮಹತ್ಯೆಗೆ ಪ್ರಚೋದನೆ ನೀಡುವುದನ್ನು ತೋರಿಸಲು ಅರ್ಜಿದಾರ ಆರೋಪಿಗಳು ನಿರ್ದಿಷ್ಟ ನಡೆ ಪ್ರದರ್ಶಿಸಿರುವುದಕ್ಕೆ ನಿಖರ ಸಾಕ್ಷ್ಯಗಳು ಇರಬೇಕಾಗುತ್ತವೆ. ಇಲ್ಲವಾದರೆ ಆತ್ಮಹತ್ಯೆಗೆ ಪ್ರಚೋದನೆ ಅಪರಾಧವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ ಪ್ರೇಮಾ ಮತ್ತು ಬಸವಲಿಂಗೇ ಗೌಡ ಅವರನ್ನು ಅಪರಾಧಿಗಳು ಎಂದು ತೀರ್ಮಾನಿಸಿ ಇಬ್ಬರಿಗೆ ಕ್ರಮವಾಗಿ ಮೂರು ಮತ್ತು ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ.

Category
ಕರಾವಳಿ ತರಂಗಿಣಿ