ಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ (ಎಂಡಿ/ಎಂಎಸ್) ಕೋರ್ಸ್ಗಳ ಸೀಟುಗಳಿಗೆ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳು, ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘದ (KRLMPCA) ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳು ಹಾಗೂ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾಲಯದಡಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.
ರಾಜ್ಯದಲ್ಲಿನ KPCF, KRLMPCA & AMPCK ಸಂಘಗಳಡಿಯಲ್ಲಿ ಬರುವ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಸೀಟುಗಳಿಗೆ 2024- 25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ನಿಗದಿಪಡಿಸಲಾದ ಶುಲ್ಕದ ವಿವರ ಕೆಳಗಿನಂತಿರಲಿದೆ.