image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಫೆಂಗಲ್ ಚಂಡಮಾರುತದ ಎಫೆಕ್ಟ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಫೆಂಗಲ್ ಚಂಡಮಾರುತದ ಎಫೆಕ್ಟ್ : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ಇಂದು ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2-3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಪಶ್ಚಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.

ತಮಿಳುನಾಡು, ಪುದುಚೆರಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನ.27ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಂಡಮಾರುತ ನ.27ರಂದು ತೀವ್ರಗೊಳ್ಳಲಿದ್ದು, ಬಳಿಕ ಉತ್ತರ-ವಾಯುವ್ಯ ಕಡೆ ಚಲಿಸಲಿದೆ. ಬಳಿಕ ಶ್ರೀಲಂಕಾ ಕರಾವಳಿಯತ್ತ ಚಲಿಸಲಿದ್ದು, ಭಾರಿ ಮಳೆಯಾಗಲಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

Category
ಕರಾವಳಿ ತರಂಗಿಣಿ