ಬೆಂಗಳೂರು: ಚಂಡಮಾರುತ ಪ್ರಭಾವದ ಮಳೆ ಹಾಗೂ ಬದಲಾದ ಸನ್ನಿವೇಶದಲ್ಲಿ ಬೆಂಗಳೂರು ನಗರದಲ್ಲಿ ತಾಪಮಾನ ತೀವ್ರವಾಗಿ ಕುಸಿಯುತ್ತಿದೆ. ಇದರೊಂದಿಗೆ, ನಗರದಾದ್ಯಂತ ವೈರಲ್ ಜ್ವರ, ಫ್ಲೂ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ನಗರದ ಆಸ್ಪತ್ರೆಗಳಲ್ಲಿ ಜ್ವರ, ಉಸಿರಾಟದ ಸೋಂಕುಗಳು ಮತ್ತು ಇನ್‌ಫ್ಲುಯೆಂಜಾ ಚಿಕಿತ್ಸೆಗೆ ಬರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ ಎಂದು ವರದಿಯಾಗಿದ್ದು,
ಫ್ಲೂ ಪ್ರಕರಣಗಳು ಮತ್ತು ಇತರ ವೈರಲ್ ಉಸಿರಾಟದ ಸೋಂಕುಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎನ್ನಲಾಗಿದ್ದು, ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಕೋವಿಡ್ ಸಂದರ್ಭದಲ್ಲಿ ಪಾಲಿಸುತ್ತಿದ್ದ ಮುನ್ನೆಚ್ಚರಿಕೆಗಳನ್ನು ಪಾಲಿಸುವ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.