image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದೇವಸ್ಥಾನ ಕೆಡವಲು ಬಂದರೆ ತಕ್ಕ ಪಾಠ ಕಲಿಸುತ್ತೇವೆ : ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ

ದೇವಸ್ಥಾನ ಕೆಡವಲು ಬಂದರೆ ತಕ್ಕ ಪಾಠ ಕಲಿಸುತ್ತೇವೆ : ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಅಭಿವೃದ್ಧಿ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಅಧಿಕಾರಕ್ಕೆ ಬಂದ ನಂತರ ಜನರನ್ನು ಕಾಂಗ್ರೆಸ್ ಸರ್ಕಾರ ಮರೆಯುತ್ತಿದೆ. ಹಿಂದೂ ದೇವಸ್ಥಾನವನ್ನು ಒಡೆಯುವ, ತೆರವುಗೊಳಿಸುವ, ದೇವಾಲಯದ ಅಭಿವೃದ್ಧಿಗೆ ಅಡ್ಡಿಪಡಿಸುವ ಕಾರ್ಯವನ್ನು ನಾವೆಂದಿಗೂ ಸಹಿಸುವುದಿಲ್ಲ. ದೇವಸ್ಥಾನ ಒಡೆಯಲು ಬಂದರೆ ನಿಮಗೆ ಸರಿಯಾದ ಪಾಠ ಕಲಿಸುತ್ತೇವೆ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಎಚ್ಚರಿಸಿದ್ದಾರೆ.

ಜೆಪಿ ನಗರ ಪುಟ್ಟೇನಹಳ್ಳಿ ಕೆರೆ ಆವರಣದಲ್ಲಿ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಮಹಿಳೆಯರಿಗೆ ಬಾಗಿನ ಅರ್ಪಿಸಿ, ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಹಿಂದೂಗಳಲ್ಲಿ ಒಡಕಿರಬಾರದು. ನಾವೆಲ್ಲಾ ಒಂದಾಗಿರಬೇಕು. ಹಾಗೆಂದು ನಾವು ಮುಸ್ಲಿಂ ವಿರೋಧಿಗಳಲ್ಲ. ಎಲ್ಲಾ ಜನ ಸಮುದಾಯ ಒಗ್ಗಟ್ಟಾಗಿರೋಣ. ನಮ್ಮ ಅಭಿವೃದ್ಧಿಗೆ ಅಡ್ಡಿಪಡಿಸುವವರಿಗೆ ತಕ್ಕ ಪ್ರತ್ಯುತ್ತರ ನೀಡೋಣ ಎಂದು ಕರೆ ನೀಡಿದರು.

ಜನ ಸದಾ ಕಾಲ ಅಭಿವೃದ್ಧಿ ಕೆಲಸ ಮಾಡುವವರ ಪರವಾಗಿರುತ್ತಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜನ ಮೆಚ್ಚುತ್ತಾರೆ. ಅವರು ಬಡವರ ಪರವಾಗಿದ್ದು, ಜನಪರ ಕೆಲಸ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಪಾರ್ಕ್ ಒತ್ತುವರಿ ಮಾಡಿಕೊಂಡಿದ್ದವರು ಕಾಂಗ್ರೆಸ್ ನಾಯಕರಾಗಿದ್ದಾರೆ. ಶಾಸಕರಾದ ನಂತರ ಕ್ಷೇತ್ರದಲ್ಲಿ ಒಂದು ಲಕ್ಷ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಈಗ ಕಾಂಗ್ರೆಸ್​ನವರು ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಬೇಡ ಎಂದು ಡಿ. ಕೆ ಶಿವಕುಮಾರ್ ಹೇಳುತ್ತಿದ್ದಾರೆ. ಯಾವ ಹೆಣ್ಣುಮಕ್ಕಳು ಬಸ್ ಬೇಡ ಎಂದು ಹೇಳಿಲ್ಲ. ಇದು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುವ ಪರಿ ಎಂದು ಅವರು ವ್ಯಂಗ್ಯವಾಡಿದರು.

Category
ಕರಾವಳಿ ತರಂಗಿಣಿ