ಮಂಡ್ಯ: ಮಂಡ್ಯದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಪ್ರಣವ್, ಆಕಾಶ್ ಹಾಗೂ ಆದರ್ಶ ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ಪೃಥ್ವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡಿಗೆ ಪ್ರವಾಸಕ್ಕೆಂದು ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಎಸ್ ಆರ್‌ಟಿಸಿ ಬಸ್ ನ್ನು ಓವರ್‌ಟೇಕ್ ಮಾಡಿ, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.