image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಅಧಿವೇಶನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ

ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಅಧಿವೇಶನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ನಮ್ಮ ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎಂಬುದು ಮತ್ತು ಮುಂದಿನ ದಿನಗಳಲ್ಲಿ ಪಕ್ಷದ ಹೋರಾಟದ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಮುಖಂಡರ ಸಭೆ ಶನಿವಾರ ನಡೆಸಿದರು.

ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್, ''ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದೇ ತಿಂಗಳು 26 ಹಾಗೂ 27ರಂದು ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ್ದಾರೆ'' ಎಂದು ತಿಳಿಸಿದರು.

'ಸುವರ್ಣಸೌಧದ ಆವರಣದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರಿಗೆ ಆಹ್ವಾನ ನೀಡಲಾಗುವುದು. ಡಿ.26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, 150 ಸಂಸದರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ'' ಎಂದು ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ