ಶಿವಮೊಗ್ಗ: ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಶಿಳ್ಳೆಕ್ಯಾತರ ಕ್ಯಾಂಪಿನ ಮಂಜುನಾಥ (25)31ರ ಸಂಜೆ ಬೈಕಿಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 9:30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಂಜುನಾಥ ಮೃತಪಟ್ಟಿದ್ದು ಸುದ್ದಿ ತಿಳಿದ ಆತನ ಪತ್ನಿ ಅಮೃತ (21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೂಲತಃ ಮೈಸೂರು ವಾಸಿಯಾಗಿದ್ದ ಅಮೃತರನ್ನು ಕಳೆದ 03 ವರ್ಷದ ಹಿಂದೆ ಮಂಜುನಾಥ ಪ್ರೀತಿಸಿ ಕೊಲ್ಲೂರಿನಲ್ಲಿ ವಿವಾಹವಾಗಿದ್ದರು.