ಮಂಗಳೂರು: ಸದಾಶಿವನಗರದ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ವಾಸವಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.
ಐದು ವರ್ಷದ ವಿಶೇಷ ಚೇತನ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ದಂಪತಿ ವಿಷ ಕುಡಿಸಿ, ಬಳಿಕ ತಾವು ನೇಣಿಗೆ ಶರಣಾಗಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದು ವರ್ಕ್ ಫ್ರಂ ಹೋಮ್ ಮಾಡುತಿದ್ದರು ಎಂದು ತಿಳಿದುಬಂದಿದ್ದು, ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಕರಣದ ಸಂಬಂಧ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್‌ಟಿ ಮಾತನಾಡಿ, ಆರ್‌ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನ ಮೃತರಾದ ಬಗ್ಗೆ ಮಾಹಿತಿ ಬಂತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.
ಸದ್ಯದ ಮಾಹಿತಿ ಪ್ರಕಾರ ಮೃತರು ಮೂಲತಃ ಉತ್ತರಪ್ರದೇಶದ ಅಲಹಾಬಾದ್‌ನವರು ಎಂದು ತಿಳಿದುಬಂದಿದ್ದು, ಕಳೆದ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮೃತ ಅನೂಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ
ದಾಖಲಿಸಿಕೊಂಡಿದ್ದೇವೆ. ಎಫ್.ಎಸ್.ಎಲ್ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾಕೆ ಆತ್ಮಹತ್ಯೆಗೆ ಶರಣಾದರು ಎಂಬುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದೇವೆ ಎಂದರು.