ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದೆ.
ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತಕುಮಾರ ಮಾಹಿತಿ ನೀಡಿ, "ಮುಡಾ ಹಗರಣ ಸಂಬಂಧ ಕೆಲವು ಬಾರಿ ವಿಚಾರಣೆ ಬೆಂಗಳೂರನಲ್ಲಿ ನಡೆದಿತ್ತು. ಮುಡಾ ಹಗರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್‌ಐಆರ್ ಆಗಿದೆ. ಆ ತನಿಖೆ ಪ್ರಮಾಣಿಕವಾಗಿ ಆಗಬೇಕೆಂದು ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೆವು. ಲೋಕಾಯುಕ್ತ ರಾಜ್ಯ ಸರ್ಕಾರದ ಕೈ ಗೊಂಬೆಯಂತೆ ಕೆಲಸ ಮಾಡುತ್ತಿದೆ. ಹೀಗಾಗಿ ನಾವು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದೆವು" ಎಂದು ತಿಳಿಸಿದರು.
"ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೇಳಿದ್ದೆವು. ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಮಣಿಂದರ್ ಸಿಂಗ್ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದಾರೆ. ವಾದ ಆಲಿಸಿದ ನ್ಯಾಯಪೀಠ ಜ.27ಕ್ಕೆ ವಿಚಾರಣೆಯನ್ನು ಮುಂದೂಡಿದೆ" ಎಂದರು.