ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದಿಂದ ಸ್ಪರ್ಧಿಸಿದ್ದ ರೇವತಿ ರಾಜ್ ಅವರ ನಾಮಪತ್ರ ತಿರಸ್ಕರಿಸಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಚುನಾವಣಾ ಆಯೋಗ ಮತ್ತು ಸಂಸದ ಯದುವೀರ್ಗೆ ನೋಟಿಸ್ ಜಾರಿ ಮಾಡಿದೆ.
ಬಿಎಸ್ಪಿಯ ರೇವತಿ ರಾಜ್ ಅಲಿಯಾಸ್ ಭೀಮಪುತ್ರಿ ರೇವತಿ ರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಜಿ. ಪಂಡಿತ್ ಅವರ ಏಕಸದಸ್ಯ ಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
2024ರ ಏಪ್ರಿಲ್ 4ರಂದು ಆಯೋಗಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ, ನಾಮಪತ್ರದ ಕೆಲವು ಕಲಂಗಳಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಲ್ಲ. ಆದ ಕಾರಣ ಏಪ್ರಿಲ್ 5ರ ಬೆಳಗ್ಗೆ 11 ಗಂಟೆಯ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ನಾಮಪತ್ರ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಸೂಚಿಸಿದ್ದರು.