image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಾರ್ವತಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್​ಗೆ ಇಡಿ ನೋಟಿಸ್

ಪಾರ್ವತಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್​ಗೆ ಇಡಿ ನೋಟಿಸ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್​ ಅವರಿಗೆ ನೋಟಿಸ್​​ ಜಾರಿಗೊಳಿಸಿದ್ದಾರೆ. ಜನವರಿ 27 ಅಥವಾ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಜನವರಿ 9 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ ಪ್ರತಿಯಾಗಿ ಉತ್ತರಿಸಿದ್ದ ಪಾರ್ವತಿ ಸಿದ್ದರಾಮಯ್ಯ, ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ಹಾಗೂ ವಯಸ್ಸಾಗಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಈಗ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಕಚೇರಿಯಲ್ಲಿ ವಿಚಾರಣೆಗೆ ಖುದ್ದು ಹಾಜರಾಗಿ, ಪ್ರಕರಣ ಸಂಬಂಧ ಸಾಕ್ಷಿಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

Category
ಕರಾವಳಿ ತರಂಗಿಣಿ