image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ : ಡಿ. ಕೆ. ಶಿ

ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ : ಡಿ. ಕೆ. ಶಿ

ಬೆಂಗಳೂರು: "ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಬೆಂಗಳೂರಿನ ಎಲ್ಲಾ ಸಂಘ - ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ನ.1 ರಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ಆದರೆ, ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು. ಆ ಮೂಲಕ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ ಕನ್ನಡದ ವೈಭವವನ್ನು ಬಿತ್ತುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

Category
ಕರಾವಳಿ ತರಂಗಿಣಿ