ಬೆಂಗಳೂರು : ತಂಗಿಯ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಧ್ರುವ (13) ಎಂದು ಗುರುತಿಸಲಾಗಿದ್ದು, ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುದಾರ ತುಂಡಾಗಿ ಕೆಳಗೆ ಬಿದ್ದಿದ್ದಾನೆ. ವಿಷಯ ತಿಳಿದ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದನು ಎನ್ನಲಾಗಿದೆ.
ಬಾಲಕ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದನು ಎನ್ನಲಾಗಿದ್ದು, ಈ ವಿಚಾರಕ್ಕೆ ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.