image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಡಾ ಆಸ್ತಿ ಜಪ್ತಿ ಮಾಡಿರುವ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಇ.ಡಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ

ಮುಡಾ ಆಸ್ತಿ ಜಪ್ತಿ ಮಾಡಿರುವ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಇ.ಡಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ನಿವೇಶನ ಹಂಚಿಕೆ ಅಕ್ರಮ ಹಗರಣದ ಕುರಿತಂತೆ ಜಾರಿ ನಿರ್ದೇಶನಾಲಯ(ಇ.ಡಿ)ವು ಮೈಸೂರಿನ ದಟ್ಟಗಳ್ಳಿಯಲ್ಲಿ ಪ್ರಾಧಿಕಾರಕ್ಕೆ ಸೇರಿದ ಜಮೀನು ಜಪ್ತಿ ಮಾಡಿರುವ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತು.

ಜಾರಿ ನಿರ್ದೇಶನಾಲಯದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ಟಿ.ನಾಯಕ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿ ಜಪ್ತಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಸಂಬಂಧ ಮುಡಾ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಬಾಕಿ ಇರುವಾಗ ಜಾರಿ ನಿರ್ದೇಶನಾಲಯದಿಂದ ಇಡೀ ಬಡಾವಣೆಗೆ ಗುರುತಿಸಿದ್ದ ಜಾಗವನ್ನು ಜಪ್ತಿ ಮಾಡಲಾಗಿದೆ. ಹಾಗಾಗಿ ಜಪ್ತಿ ಆದೇಶ ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು.

ಅಲ್ಲದೆ, ಅರ್ಜಿದಾರರ ಸಂಘ ಮುಡಾ ವಿರುದ್ಧ 2023ರಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ಬಾಕಿ ಇರುವ ಮಧ್ಯೆಯೇ ಜಾರಿ ನಿರ್ದೇಶನಾಲಯ ಯಾವುದೇ ನೋಟಿಸ್ ನೀಡದೆ, ನಿಯಮಗಳನ್ನು ಪಾಲನೆ ಮಾಡದೆ ಏಕಪಕ್ಷೀಯವಾಗಿ ಭೂಮಿ ಜಪ್ತಿ ಆದೇಶ ಹೊರಡಿಸಿರುವುದು ಕಾನೂನುಬಾಹಿರ. ಹಾಗಾಗಿ ನ್ಯಾಯಾಲಯ ಮಧ್ಯಂತರ ಆದೇಶ ನೀಡಿ ಅರ್ಜಿದಾರರ ಹಕ್ಕು ರಕ್ಷಿಸಬೇಕು ಎಂದು ಕೋರಿದರು.

Category
ಕರಾವಳಿ ತರಂಗಿಣಿ