image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಲು KSLUಗೆ ಹೈಕೋರ್ಟ್ ಸೂಚನೆ

ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಲು KSLUಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆ ಮಾಡುವ ಸಂಬಂಧ ಹೊಸ ಮಾರ್ಗಸೂಚಿಗಳನ್ನು ರಚಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‌ಎಲ್‌ಯು) ಹೈಕೋರ್ಟ್ ನಿರ್ದೇಶನ ನೀಡಿದೆ.

ಆನೇಕಲ್ ಮೂಲಕದ ಕಾನೂನು ವಿದ್ಯಾರ್ಥಿ ರಾಹುಲ್ ಹೆಚ್.ಎಂ. ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ಹೊಸ ಮಾರ್ಗ ಸೂಚಿಯಲ್ಲಿ ಪರೀಕ್ಷಾ ಮೇಲ್ವಿಚಾರಕರು ಬಾಡಿ ವೋರ್ನ್ ಕ್ಯಾಮರಾ ಧರಿಸಬೇಕು. ಪಾರದರ್ಶಕ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಗರಿಷ್ಠ ಪ್ರಮಾಣದಲ್ಲಿ ತಂತ್ರಜ್ಞಾನ ಬಳಸಿಕೊಳ್ಳಬೇಕು ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಅಂಶಗಳಿರಬೇಕು ಎಂದು ಪೀಠ ಸೂಚಿಸಿದೆ.

ಅಲ್ಲದೆ, ಪರೀಕ್ಷಾ ಪಾವಿತ್ರ್ಯತೆಯನ್ನು ಎತ್ತಿಹಿಡಿಯಬೇಕು, ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಅಕ್ರಮ ತಡೆಯಲು ಅಗತ್ಯ ನಿಯಮಗಳನ್ನು ರೂಪಿಸಬೇಕು. ಆ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ವೇದಿಕೆ ಕಲ್ಪಿಸಿಕೊಡಬೇಕು. ಹೊಸ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯದ ಜೊತೆ ಸಂಯೋಜನೆ ಹೊಂದಿರುವ ಎಲ್ಲಾ ಕಾನೂನು ಕಾಲೇಜುಗಳಲ್ಲಿ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

Category
ಕರಾವಳಿ ತರಂಗಿಣಿ