image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟಾಪಿಂಗ್ - ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟಾಪಿಂಗ್ - ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ 1,700 ಕೋಟಿ ರೂ. ಹಣ ವೆಚ್ಚ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಯೋಜನೆಯಲ್ಲಿ 14 ಪ್ಯಾಕೇಜ್​ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂಎಸ್ಎಸ್​ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್​ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದರು.

ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ