image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡುವಂತೆ ಬಿಜೆಪಿ ಸಂಸದ ಯದುವೀರ್ ಮನವಿ: ಕೇಂದ್ರ ಸರ್ಕಾರದಿಂದ ಸ್ಪಂದನೆ

ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡುವಂತೆ ಬಿಜೆಪಿ ಸಂಸದ ಯದುವೀರ್ ಮನವಿ: ಕೇಂದ್ರ ಸರ್ಕಾರದಿಂದ ಸ್ಪಂದನೆ

ಮೈಸೂರು : ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಸಂಸದರ ಮನವಿಗೆ ಸ್ಪಂದಿಸಿರುವ ಕೇಂದ್ರ, ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ.

ಪರವಾನಗಿರಹಿತ ತಂಬಾಕು ಬೆಳೆಗಾರರು ಎಫ್​ಸಿವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೇ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದರು.

ಎಫ್‌ಸಿವಿ ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. 40,487 ನೋಂದಾಯಿತ ಹಾಗೂ 12,838 ಪರವಾನಗಿರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ. ಕೇಂದ್ರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕದ ತಂಬಾಕು ಬೆಳೆಗಾರರ ಸಂಕಷ್ಟ ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಮರ್ಪಕ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದರು.

ಕಳೆದ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ತಂಬಾಕು ಬೆಳೆ ನಷ್ಟವಾಗಿತ್ತು. ಬೆಳೆ ಉಳಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರಿ‌ಂದ ಒಟ್ಟಾರೆಯಾಗಿ ಬೆಳೆಗಾರರಿಗೆ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿತ್ತು. ಇದು ರೈತರನ್ನು ಸಂಕಷ್ಟಕ್ಕೆ ದೂಡಿತ್ತು ಎಂದು ಮನವರಿಕೆ ಮಾಡಿಕೊಡಲಾಗಿತ್ತು ಎಂದು ಯದುವೀರ್ ಹೇಳಿದರು.

Category
ಕರಾವಳಿ ತರಂಗಿಣಿ