image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆರ್​ಡಿಪಿಆರ್ ವಿವಿ ಮಸೂದೆ ಸರಕಾರಕ್ಕೆ ಹಿಂದಿರುಗಿಸಿದ ರಾಜ್ಯಪಾಲ ಗೆಹ್ಲೋಟ್‌

ಆರ್​ಡಿಪಿಆರ್ ವಿವಿ ಮಸೂದೆ ಸರಕಾರಕ್ಕೆ ಹಿಂದಿರುಗಿಸಿದ ರಾಜ್ಯಪಾಲ ಗೆಹ್ಲೋಟ್‌

 

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮತ್ತೆ ಸಂಘರ್ಷ ಉಂಟಾಗುವ ಲಕ್ಷಣ ಗೋಚರಿಸಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ 2024ನ್ನು ಹಿಂಪಡೆಯುವಂತೆ ಸಲಹೆ ನೀಡಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್, ಆ ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ.

ಜೊತೆಗೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಮಾದರಿಯಲ್ಲಿ 'ಮೈಸೂರು ಅಭಿವೃದ್ಧಿ ಪ್ರಾಧಿಕಾರ' ರಚಿಸಲು ರೂಪಿಸಿದ 'ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮಸೂದೆ–2024' ಕೆಲ ಸ್ಪಷ್ಟೀಕರಣ ಕೋರಿ ಕಡತವನ್ನೂ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ 'ಮೈಸೂರು ಅಭಿವೃದ್ಧಿ ಪ್ರಾಧಿಕಾರ' ರಚಿಸುವ 'ಮೈಸೂರು ಅಭಿವೃದ್ದಿ ಪ್ರಾಧಿಕಾರ ಮಸೂದೆ 2024'ಯನ್ನೂ ರಾಜ್ಯಪಾಲರು ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೋರಿ ಹಿಂದಿರುಗಿಸಿದ್ದಾರೆ.

Category
ಕರಾವಳಿ ತರಂಗಿಣಿ