image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನ : ಸರಕಾರಕ್ಕೆ ಹೈ ಕೋರ್ಟ್ ನೋಟಿಸ್

ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನ : ಸರಕಾರಕ್ಕೆ ಹೈ ಕೋರ್ಟ್ ನೋಟಿಸ್

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚನೆ ಮಾಡಿರುವ ಸಮಿತಿ ಸದಸ್ಯರಿಗೆ ಸಂಪುಟ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬಿಜೆಪಿಯ ಪಿ. ರಾಜೀವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠ, ರಾಜ್ಯ ಸರ್ಕಾರ ಮತ್ತು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಸಮಿತಿಯ ಸದಸ್ಯರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳನ್ನು ನೇಮಕ ಮಾಡಬಹುದಿತ್ತು. ಅದಕ್ಕೆ ಬದಲಾಗಿ ರಾಜ್ಯದಲ್ಲಿ ಅಡಳಿತ ಚಿಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ರಾಜ್ಯ, ಜಿಲ್ಲಾ ಮಟ್ಟದಲ್ಲಿ ನೇಮಕ ಮಾಡಲಾಗಿದೆ. ಅವರಿಗೆ ಯಾವುದೇ ಶೈಕ್ಷಣಿಕ ಅರ್ಹತೆಗಳು ಇಲ್ಲ‌ ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾರ್ಚ್​​ 27ಕ್ಕೆ ಮುಂದೂಡಿತು.ರಾಜ್ಯ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಎಂಬ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದರಂತೆ ಈ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಿದ್ದು, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಹೆಚ್. ಎಂ. ರೇವಣ್ಣ, ಡಾ. ಪುಷ್ಪಾ ಅಮರನಾಥ್, ಎಸ್.ಆರ್. ಪಾಟೀಲ್ - ಬ್ಯಾಡಗಿ, ಮೆಹರಾಜ್ ಖಾನ್ ಮತ್ತು ಸೂರಜ್ ಹೆಗಡೆ ಅವರು ಸಮಿತಿ ಸದಸ್ಯರಾಗಿದ್ದಾರೆ. ಇವರಿಗೆ ಯಾವುದೇ ಶೈಕ್ಷಣಿಕ ಮತ್ತು ತಾಂತ್ರಿಕ ಅರ್ಹತೆಗಳನ್ನು ಪರಿಗಣಿಸದೆ, ಅಧಿಕಾರ‌ಕ್ಕಾಗಿ ಹುದ್ದೆಗಳನ್ನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Category
ಕರಾವಳಿ ತರಂಗಿಣಿ