image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗುತ್ತಿಗೆದಾರರ ವಿರುದ್ಧದ ಆರೋಪ ಕೈಬಿಟ್ಟಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದ ಮಾಡಿದ ಹೈಕೋರ್ಟ್

ಗುತ್ತಿಗೆದಾರರ ವಿರುದ್ಧದ ಆರೋಪ ಕೈಬಿಟ್ಟಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದ ಮಾಡಿದ ಹೈಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 2005 ಮತ್ತು 2012ರ ಅವಧಿಯಲ್ಲಿ ನಡೆದ ಗುತ್ತಿಗೆ ಕಾಮಗಾರಿ ಅವ್ಯವಹಾರದಲ್ಲಿ ಪಾಲಿಕೆಯ ನಿವೃತ್ತ ಮುಖ್ಯ ಎಂಜಿನಿಯರ್ ಬಿ.ಟಿ.ರಮೇಶ್ ಸೇರಿದಂತೆ ಹಲವು ಹಾಲಿ ಹಾಗೂ ನಿವೃತ್ತ ಎಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ತೀವ್ರ ಹಿನ್ನಡೆಯಾಗಿದ್ದು, ಎಲ್ಲರ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಅಧೀನ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನಗರದ 77ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು 2023ರ ನವೆಂಬರ್​​ 8ರಂದು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಇಡೀ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿರುವ ನ್ಯಾಯಪೀಠ, ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳ ಆಧಾರದ ಮೇಲೆ ಹೊಸದಾಗಿ ಪ್ರಕರಣವನ್ನು ಪರಿಗಣಿಸಬೇಕು. ಆರೋಪಿಗಳ ವಿರುದ್ಧ ಪ್ರಾಸಿಕ್ಯೂಷನ್​​ಗೆ ಸರ್ಕಾರ ನೀಡಿರುವ ಪೂರ್ವಾನುಮತಿ ಆಧರಿಸಿ, ಕಾಗ್ನಿಜೆನ್ಸ್ ಸ್ವೀಕರಿಸಿದ ಹಂತದಿಂದ (ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ) ವಿಚಾರಣಾ ಪ್ರಕಿಯೆ ಮುಂದುವರೆಸಬೇಕು ಎಂದು ಸೆಷನ್ಸ್ ನ್ಯಾಯಾಲಯಕ್ಕೆ ಪೀಠ ನಿರ್ದೇಶಿಸಿದೆ.

ಯಾವ ಆರೋಪಿಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಪೂರ್ವಾನುಮತಿ ನೀಡಿಲ್ಲವೋ, ಅಂತಹವರ ವಿರುದ್ಧ ವಿಚಾರಣೆ ನಡೆಸುವಂತಿಲ್ಲ. ತಾಂತ್ರಿಕ ವಿಚಕ್ಷಣಾ ಸಮಿತಿಯ (ಟಿವಿಸಿಸಿ) ವರದಿ ಇಲ್ಲ. ಇದರಿಂದ ಸೆಕೆಂಡರಿ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳು ಒದಗಿಸಿದ ಸಂದರ್ಭದಲ್ಲಿ ಅದನ್ನು ಪರಿಗಣಿಸಬೇಕು. ಪ್ರಾಸಿಕ್ಯೂಷನ್​​ಗೆ ಪ್ರಕರಣದ ಕುರಿತು ಎಲ್ಲಾ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಲ್ಲಿಸಲು ಅನುಮತಿ ನೀಡಬೇಕು. ಆ ನಂತರ ಮೆರಿಟ್ ಆಧಾರದಲ್ಲಿ ಕಾನೂನು ಪ್ರಕಾರ ಪ್ರಕರಣವನ್ನು ವಿಲೇವಾರಿ ಮಾಡಬೇಕು ಎಂದು ಸೆಷನ್ಸ್ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Category
ಕರಾವಳಿ ತರಂಗಿಣಿ