image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸುವರ್ಣಸೌಧದ ಮುಂದೆ ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ: ವಿಚಾರಣಾ ಆಯೋಗ ರಚನೆಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಸುವರ್ಣಸೌಧದ ಮುಂದೆ ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ: ವಿಚಾರಣಾ ಆಯೋಗ ರಚನೆಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ(suvarna soudha)) ಸಮೀಪ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ(obc) ಮೀಸಲಾತಿ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್(lattee charge) ಮಾಡಿರುವ ಪ್ರಕರಣವನ್ನು ಹೈಕೋರ್ಟ್​​ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್(high court) ನಿರ್ದೇಶಿಸಿದೆ.

ಸುವರ್ಣ ಸೌಧದ ಮುಂದೆ 2024ರ ಡಿಸೆಂಬರ್ 10ರಂದು ನಡೆದ ಲಾಠಿ ಚಾರ್ಜ್ ಘಟನೆಯನ್ನು ತನಿಖಾ ಆಯೋಗಕ್ಕೆ ವಹಿಸಲು ರಾಜ್ಯ ಸರ್ಕಾರಕ್ಕೆ(state government) ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ರಾಜ್ಯ ಸರ್ಕಾರವು ಹೈಕೋರ್ಟ್​​​ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗವು ಕಾಲ ಮಿತಿಯಲ್ಲಿ ತನಿಖೆ(investigation) ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅರ್ಜಿಯ ಕುರಿತು ಈ ಹಿಂದೆ ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ''ಸುವರ್ಣ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಿಗದಿತ ಸ್ಥಳ ತೊರೆಯದಂತೆ ಪ್ರತಿಭಟನಾಕಾರರಿಗೆ ಎಡಿಜಿಪಿ ಸೂಚಿಸುತ್ತಿರುವ ವಿಡಿಯೋ ಮತ್ತು ಚಿತ್ರಗಳಿವೆ. ಪ್ರತಿಭಟನಾಕಾರರು ಕಲ್ಲು ಮತ್ತು ಚಪ್ಪಲಿಗಳನ್ನು ಪೊಲೀಸರತ್ತ ಎಸೆದಿದ್ದಾರೆ. ಮದ್ಯ ಸೇವಿಸಿ, ಪೊಲೀಸರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋಗಳಿವೆ. ಪ್ರತಿಭಟನೆಗೆ ನಿಗದಿಯಾಗಿದ್ದ ಸ್ಥಳಕ್ಕೆ ಮರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪೊಲೀಸರಿಂದ ಲಾಠಿ ಕಸಿದುಕೊಂಡು ಅದರಿಂದ ಪೊಲೀಸರಿಗೆ ಹಲ್ಲೆ ಮಾಡುವ ದೃಶ್ಯಗಳಿವೆ. ರಾಷ್ಟ್ರೀಯ ಹೆದ್ದಾರಿ ತಡೆದು, ಫೆನ್ಸ್ ದಾಟುತ್ತಿರುವ ವಿಡಿಯೋಗಳಿವೆ. ಈ ಸಂಬಂಧ ಪೆನ್‌ಡ್ರೈವ್ ಅನ್ನು ನ್ಯಾಯಾಲಯಕ್ಕೆ ನೀಡಿದ್ದೇವೆ'' ಎಂದು ವಾದಿಸಿದ್ದರು.

 

Category
ಕರಾವಳಿ ತರಂಗಿಣಿ