image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅತಿ ವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್​ ಸಂಸ್ಥೆಗಳ ಜೊತೆಗೂಡಿ ಯೋಜನೆ ರೂಪಿಸಲು ಮುಂದಾದ ರಾಜ್ಯ ಸರ್ಕಾರ

ಅತಿ ವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್​ ಸಂಸ್ಥೆಗಳ ಜೊತೆಗೂಡಿ ಯೋಜನೆ ರೂಪಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ(karnataka) ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ ಹಾಗೂ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಕಾರ್ಪೊರೇಟ್‌ ಸಂಸ್ಥೆಗಳ(corporate company) ಜೊತೆಗೂಡಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಲೈಸೊಸಮಲ್‌ ಸ್ಟೋರೇಜ್‌ ಡಿಸಾರ್ಡರ್‌(laisosamal storage disorder) ಎಂಬ ಅತ್ಯಂತ ಅಪರೂಪದ ಕಾಯಿಲೆಗೆ ಹಲವಾರು ಮಕ್ಕಳು ತುತ್ತಾಗಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ ಗೌಷೆ ರೋಗ ಎಂಪಿಎಸ್‌ (Gaucher), ಪಾಂಪೆ ಎಂಬ ಅನುವಂಶಿಕ ಕಾಯಿಲೆಯೂ ಈ ಗುಂಪಿಗೆ ಸೇರಿವೆ. ರಾಷ್ಟ್ರೀಯ ಅಪರೂಪದ ಕಾಯಿಲೆ ನೀತಿಯಡಿ (nprd) ಇಂಥ ರೋಗಕ್ಕೆ ತುತ್ತಾಗಿರುವ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ಕೇಂದ್ರ ಸರ್ಕಾರ ಅನುದಾನ ಒದಗಿಸುತ್ತಿದೆ. 2016ರಿಂದ ಕರ್ನಾಟಕದ ಇಂದಿರಾಗಾಂಧಿ(Indira Gandhi) ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಚಿಕಿತ್ಸಾ ವೆಚ್ಚ ಒಂದು ವರ್ಷಕ್ಕೆ ಕನಿಷ್ಠ 50 ಲಕ್ಷ ರೂಪಾಯಿಗಳಾಗುತ್ತದೆ. ಗರಿಷ್ಠ ಕೋಟಿ ರೂ. ದಾಟಬಹುದು ಎಂದು ಅಂದಾಜಿಸಲಾಗಿದೆ.

ದೇಶದಲ್ಲಿ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಲು ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಫಾರ್‌ ರೇರ್‌ ಡೀಸಿಸ್‌( excellence for rare disease) ಎಂಬ 13 ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಪೈಕಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಕೂಡ ಒಂದಾಗಿದೆ. ಇಂದಿರಾಗಾಂಧಿ ಸಂಸ್ಥೆಯಲ್ಲಿ 22 ಮಕ್ಕಳಿಗೆ ಕನಿಷ್ಠ ಮಿತಿಯಾದ 50 ಲಕ್ಷ ರೂ. ಒದಗಿಸಿ ನೀಡಿ ಚಿಕಿತ್ಸೆಯನ್ನು ನೀಡಲಾಗಿದೆ. ಇದುವರೆಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ 76 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ(central government) ಮನವಿ ಮಾಡಲಾಗಿದೆ.

ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌, ವೈದ್ಯಕೀಯ ವೆಚ್ಚಗಳನ್ನು ಹಂಚಿಕೊಳ್ಳುವ ಭಾಗವಾಗಿ, ಸಂಸ್ಥೆಯಲ್ಲಿ ಇರಿಸಲಾಗಿರುವ ಕಾರ್ಪಸ್ ನಿಧಿಯ ಸ್ವಲ್ಪ ಭಾಗವನ್ನು ವಿನಿಯೋಗಿಸಲು ಐಜಿಐಸಿಹೆಚ್ ಡಾ. ಕೆ. ಎಸ್. ಸಂಜಯ್ ಅವರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ. ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಈಗ ಕಾರ್ಪೊರೇಟ್‌ ಸಂಸ್ಥೆಗಳಿಗೆ ಮನವಿ ಮಾಡಿದೆ. ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ಯೋಜನೆಯಡಿ ಕಂಪನಿಗಳು ಅನುದಾನ ನೀಡಲಿ ಅಥವಾ ಮಕ್ಕಳನ್ನು ದತ್ತು ಪಡೆದು ಚಿಕಿತ್ಸಾ ವೆಚ್ಚ ಭರಿಸಲಿ ಎಂದು ಮನವಿ ಮಾಡಿದೆ.

 

Category
ಕರಾವಳಿ ತರಂಗಿಣಿ