image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದ ಶಕ್ತಿ ಸೌಧ ವಿಧಾನ ಸೌಧಕ್ಕೆ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಶ್ವತ ವರ್ಣರಂಜಿತ ದೀಪಾಲಂಕಾರ

ರಾಜ್ಯದ ಶಕ್ತಿ ಸೌಧ ವಿಧಾನ ಸೌಧಕ್ಕೆ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಶ್ವತ ವರ್ಣರಂಜಿತ ದೀಪಾಲಂಕಾರ

ಬೆಂಗಳೂರು: ವಿಧಾನಸೌಧ ಇನ್ನು ಮುಂದೆ ಝಗಮಗಿಸಲಿದೆ. ಶಾಶ್ವತ ವರ್ಣರಂಜಿತ ದೀಪಾಲಂಕಾರದೊಂದಿಗೆ(permanent lighting) ರಾಜ್ಯದ ಶಕ್ತಿಸೌಧ ಮಿಂಚಲಿದೆ. ಸಿಎಂ ಸಿದ್ದರಾಮಯ್ಯನವರು ನೂತನ ನಿತ್ಯ ದೀಪಾಲಂಕಾರವನ್ನು ಭಾನುವಾರ ಲೋಕಾರ್ಪಣೆಗೊಳಿಸಿದರು.

ಪ್ರತಿಷ್ಠಿತ ಐತಿಹಾಸಿಕ ಸೌಧಕ್ಕೆ ವರ್ಣರಂಜಿತ ಎಲ್ ಇಡಿ(led) ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಆಡಳಿತ ಕೇಂದ್ರ ವಿಧಾನ ಸೌಧದ(vidhan soudha) ಸೌಂದರ್ಯ ಮತ್ತಷ್ಟು ಹೆಚ್ಚಲಿದೆ. ಈ ಮುಂಚೆ ವಿಶೇಷ ದಿನಗಳಂದು ಮಾತ್ರ ವಿಧಾನಸೌಧಕ್ಕೆ ತಾತ್ಕಾಲಿಕ ದೀಪಾಲಂಕಾರ ಮಾಡಲಾಗುತ್ತಿತ್ತು.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ದೀಪಾಲಂಕಾರವನ್ನು ಮಾಡಲಾಗಿದೆ. ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6.30 ಗಂಟೆಯಿಂದ 10 ಗಂಟೆಯವರೆಗೆ ವರ್ಣರಂಜಿತ ದೀಪಲಂಕಾರವನ್ನು ಉರಿಸಲಾಗುವುದು.‌ ಇದರ ಜೊತೆಗೆ ಸ್ವಾತಂತ್ರ್ಯ ದಿನಾಚರಣೆ, ಮಹಾತ್ಮ ಗಾಂಧಿ ಜಯಂತಿ, ಗಣರಾಜ್ಯೋತ್ಸವ(republic day) ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ದೀಪಗಳನ್ನು ಉರಿಸಲಾಗುವುದು. ಇನ್ನು ಪ್ರತಿ ಭಾನುವಾರ ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಕ್ಕೆ ಅವಕಾಶ ನೀಡಲು ಚಿಂತಿಸಲಾಗಿದೆ.

ದೀಪಾಲಂಕಾರವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ(siddaramaih), "ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ. ಸಂಸತ್ತು ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು" ಎಂದರು.

"ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು. ಜನರ ಕೆಲಸ ಸರಿಯಾಗಿ ಮಾಡಲು ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ. ಈ ಉದ್ದೇಶಕ್ಕಾಗಿ ವಿಧಾನಸೌಧ ಕಟ್ಟಿಸಲಾಗಿದೆ. ಈ ಉದ್ದೇಶ ಈಡೇರಿಸಿ‌ ಜನರ ಸಮಸ್ಯೆ ಬಗೆಹರಿಸುವ ಶಕ್ತಿ ನಮಗೆ ಬರಲಿ, ರಾಜ್ಯದ ಜನತೆಗೂ ಆರ್ಥಿಕ ಶಕ್ತಿ ತರಲು ಯತ್ನಿಸೋಣ" ಎಂದು ಕರೆ ನೀಡಿದರು.

 

Category
ಕರಾವಳಿ ತರಂಗಿಣಿ