image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಿಇಟಿ ಬರೆಯಲು ಬಂದ ಕೆಲ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಅಧಿಕಾರಿಗಳ ದುರ್ನಡತೆ ಸಹಿಸಲು ಅಸಾಧ್ಯ : ಸಂಸದ ಯದುವೀರ್

ಸಿಇಟಿ ಬರೆಯಲು ಬಂದ ಕೆಲ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಅಧಿಕಾರಿಗಳ ದುರ್ನಡತೆ ಸಹಿಸಲು ಅಸಾಧ್ಯ : ಸಂಸದ ಯದುವೀರ್

ಮೈಸೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ಬಂದ ಕೆಲ ವಿದ್ಯಾರ್ಥಿಗಳ ತೆಗೆಸಿರುವ ಅಧಿಕಾರಿಗಳ ದುರ್ನಡತೆ ಸಹಿಸಲು ಅಸಾಧ್ಯ. ಇದು ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾತ್ರವಲ್ಲ, ಹಿಂದೂ ಸಮುದಾಯಕ್ಕೆ ಎಸಗಿರುವ ದ್ರೋಹ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಇದು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆದಿರುವ ದುಷ್ಕೃತ್ಯ ಎಂದು ಆರೋಪಿಸಿದ್ದಾರೆ. ಈ ಘಟನೆಯ ಕುರಿತು ಮೈಸೂರು ಬಿಜೆಪಿ ಘಟಕದ ವತಿಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಸರಿಯಾದ ನ್ಯಾಯ ಒದಗಿಸಿಕೊಡಬೇಕು. ಈ ವಿಷಯದಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜನಿವಾರ ಎನ್ನುವುದು ಬ್ರಾಹ್ಮಣ ಸಮುದಾಯದವರಿಗೆ ಅತ್ಯಂತ ಪವಿತ್ರವಾದುದು. ಹೋಮ-ಹವನಗಳನ್ನು ಮಾಡಿ ಅತ್ಯಂತ ಸಂಪ್ರದಾಯಬದ್ಧ ಹಾಗೂ ಶಾಸ್ತ್ರೋಕ್ತವಾಗಿ, ಶ್ರದ್ಧಾಭಕ್ತಿಗಳಿಂದ ಈ ಪವಿತ್ರ ಜನಿವಾರವನ್ನು ಧರಿಸಲಾಗುತ್ತದೆ. ಇದಕ್ಕೆ ವಿಶೇಷ ಹಾಗೂ ದೈವಿಕ ಸ್ಥಾನವಿದೆ ಎಂದು ತಿಳಿಸಿದ್ದಾರೆ.

ಇಂತಹ ಪವಿತ್ರ ಜನಿವಾರವನ್ನು ಜಾತಕ, ಗುರುಬಲ, ನೋಡಿ ದಿನಾಂಕ ನಿರ್ಧರಿಸಿ ಬ್ರಾಹ್ಮಣರು ಧರಿಸುತ್ತಾರೆ. ಬ್ರಾಹ್ಮಣ ಸಂಪ್ರದಾಯವನ್ನು ಧಿಕ್ಕರಿಸಿ, ಜನಿವಾರವನ್ನು ಕಿತ್ತೆಸದ ಅಧಿಕಾರಿಗಳ ವರ್ತನೆ ಖಂಡನೀಯ ಹಾಗೂ ಆಕ್ಷೇಪಾರ್ಹ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಲೇ ಇದೆ. ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಎಂದು ಬೀದರ್‌ ಮತ್ತು ಶಿವಮೊಗ್ಗದ ತೀರ್ಥಹಳ್ಳಿಯ ಘಟನೆ. ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ.

ಧರ್ಮ, ಜಾತಿ, ಸಮುದಾಯಕ್ಕೆ ಗೌರವ ನೀಡುವುದು ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಅಲ್ಪಸಂಖ್ಯಾತ ಸಮುದಾಯದ ಓಲೈಕೆಯಲ್ಲಿ ಮುಳುಗಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳು ಕಾಣಿಸುತ್ತಲೇ ಇಲ್ಲ. ತುಷ್ಟೀಕರಣ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಯಾರೊಬ್ಬರೂ ಕೂಡ ಈ ಘಟನೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಹಿಂದೂಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಸಂಸದರು ಸ್ಪಷ್ಟಪಡಿಸಿದ್ದಾರೆ.

ಬೀದರ್‌ ಹಾಗೂ ತೀರ್ಥಹಳ್ಳಿಯ ಘಟನೆಯ ವಿರುದ್ಧ ನಾವು ಉಗ್ರ ಹೋರಾಟ ನಡೆಸುತ್ತೇವೆ. ಬ್ರಾಹ್ಮಣ ಸಮುದಾಯದ ಪರ ನಾವು ಸದಾ ನಿಂತಿರುತ್ತೇವೆ. ಸರ್ಕಾರ ತನ್ನ ನಿಲುವನ್ನು ಬದಲಿಸಿಕೊಳ್ಳದಿದ್ದರೆ, ಅದರ ವಿರುದ್ಧವೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಂಸದ ಯದುವೀರ್​ ಎಚ್ಚರಿಸಿದ್ದಾರೆ.

Category
ಕರಾವಳಿ ತರಂಗಿಣಿ