image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಉಗ್ರರ ಸದೆಬಡೆಯುವಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಇದೆ - ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಗ್ರರ ಸದೆಬಡೆಯುವಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಇದೆ - ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನ ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾತನಾಡಿದ ಸಿಎಂ, ಉತ್ತಮ ಶಿಕ್ಷಣ ಪಡೆದಿದ್ದ, ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿದ್ದು, ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅಮಾಯಕ ಜನರನ್ನು ಹಾಡಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹೇಯಕೃತ್ಯ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ, ಬಾಲಾಕೋಟ್‌ನ ಈ ರೀತಿಯ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂಥಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದು ಇದೇ ಸಂದರ್ಭದಲ್ಲಿ‌ ಅವರು ತಿಳಿಸಿದರು.ಕನ್ನಡಿಗರಾದ ಭರತ್ ಭೂಷಣ್, ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದ ಆಂದ್ರಪ್ರದೇಶದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧು ಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದು ತಿಳಿಸಿದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದು ಧೈರ್ಯ ತುಂಬಿದರು.

ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡಿಗರಾದ ಭರತ್ ಭೂಷಣ್, ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದ ಆಂದ್ರಪ್ರದೇಶದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧು ಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದು ತಿಳಿಸಿದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

 

Category
ಕರಾವಳಿ ತರಂಗಿಣಿ