image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮೇ 1ರಿಂದ ಜಗತ್ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತ

ಮೇ 1ರಿಂದ ಜಗತ್ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತ

ಶಿವಮೊಗ್ಗ: ಬರೋಬ್ಬರಿ ನಾಲ್ಕು ತಿಂಗಳ ಕಾಮಗಾರಿ ಮುಕ್ತಾಯದ ನಂತರ ಮೇ 1ರಿಂದ ಜಗತ್ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಲಿದೆ.

ಸಾಗರ ತಾಲೂಕು ಜೋಗ ಜಲಪಾತವು ಜನವರಿ 1ರಿಂದ ಮಾರ್ಚ್ 30ರ ತನಕ ಜೋಗ ಜಲಪಾತದ ಬಳಿ ವಿವಿಧ ಕಾಮಗಾರಿಗಳ ನಡೆಯಬೇಕಿದ್ದ ಕಾರಣ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಪ್ರವೇಶ ಬಂದ್ ಮಾಡಲಾಗಿತ್ತು. ಜೋಗದಲ್ಲಿ ಪ್ರವಾಸಿಗರಿಗೆ ವೀಕ್ಷಣಾ ಗೋಪುರ, ಪಾರ್ಕಿಂಗ್, ಪ್ರವೇಶ ದ್ವಾರ ಸೇರಿದಂತೆ ಇತರೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಈ ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 1ರಿಂದ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ