ಮಂಗಳೂರು: ಮಂಗಳೂರಿನ ಬಜಪೆ ಕಿನ್ನಿಪದವು ಪ್ರದೇಶದಲ್ಲಿ ಗುರುವಾರ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್(police) ವರಿಷ್ಠಾಧಿಕಾರಿಗೆ ವಿಧಾನಸಭಾಧ್ಯಕ್ಷ(speeker) ಯು.ಟಿ.ಖಾದರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್(dinesh gundurao) ಸೂಚನೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸ್ಪೀಕರ್ ಯು.ಟಿ. ಖಾದರ್, "ಈ ಬಗ್ಗೆ ಮುಖ್ಯಮಂತ್ರಿ(chief minister) ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
ಈ ಬಗ್ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, "ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ ಮತ್ತು ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ(government) ಸೂಕ್ತ ಕ್ರಮ ತೆಗೆದುಕೊಳ್ಳಲಿದೆ" ಎಂದಿದ್ದಾರೆ.
"ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ, ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ. ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ" ಎಂದು ದೂರಿದ್ದಾರೆ.