image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ...

ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ...

ಬೆಂಗಳೂರು: ರಾಜಧಾನಿಯಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ. ಮೇ 4ರಂದು ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಮೇ 7 ಮತ್ತು 8ರಂದು ಗುಡುಗು, ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಎರಡು ದಿನಗಳ ಕಾಲ ನಗರದಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕಳೆದ ವರ್ಷದ ಪೂರ್ವ ಮುಂಗಾರಿಗೆ ಹೋಲಿಸಿದರೆ, ಈ ವರ್ಷ ನಗರದಲ್ಲಿ ಉತ್ತಮ ಮಳೆಯಾಗಿದೆ. ನೀರಿನ ಬರ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹವಾಮಾನ ಇಲಾಖೆಯ ಅಂಶಗಳಿಂದ ತಿಳಿದು ಬಂದಿದೆ.

ಕಳೆದ ವರ್ಷ ನಗರದಲ್ಲಿ ವಾಡಿಕೆಗಿಂತ 3%ನಷ್ಟು ಕಡಿಮೆ ಮಳೆಯಾಗಿತ್ತು. ಇದರಿಂದ ಬೆಂಗಳೂರಿನ ಕೆಲ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿತ್ತು. ಆದರೆ ವರ್ಷ ಇದುವರೆಗೆ 42%ರಷ್ಟು ಅಧಿಕ ವರ್ಷಧಾರೆಯಾಗಿದೆ. ವಾಡಿಕೆ ಪ್ರಕಾರ, ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಮಳೆಯ ಪ್ರಮಾಣ 156 ಮಿ.ಮೀ ಇರುತ್ತದೆ. ಕಳೆದ ಐದು ವರ್ಷಗಳಲ್ಲಿ ಅಂದರೆ 2020ರಲ್ಲಿ 38% ಮಳೆಯಾದರೆ, 2021ರಲ್ಲಿ 8% ಮಳೆಯಾಗಿತ್ತು. 2022ರಲ್ಲಿ 109% ಹಾಗೂ 2023ರಲ್ಲಿ 34% ಮತ್ತು 2024ರಲ್ಲಿ 3%ರಷ್ಟು ಮಳೆ ದಾಖಲಾಗಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿ - ಅಂಶಗಳ ಪ್ರಕಾರ ರಾಜಧಾನಿಯಲ್ಲಿ ಜನವರಿಯಿಂದ ಮೇ 2ರವರೆಗೆ ವಾಡಿಕೆ ಪ್ರಕಾರ 64.3 ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಇಲ್ಲಿಯವರೆಗೆ 85.1 ಮಿ.ಮೀ. ಮಳೆಯಾಗಿದೆ. ವಾಡಿಕೆಗಿಂತ ಶೇ.32ರಷ್ಟು ಅಧಿಕ ಮಳೆಯಾಗಿದೆ. ಜೂನ್‌ ಮಧ್ಯ ಭಾಗದಲ್ಲಿ ಮುಂಗಾರು ನಗರವನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Category
ಕರಾವಳಿ ತರಂಗಿಣಿ