image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆಯಿಲ್ ಗೋದಾಮಿಗೆ ಬೆಂಕಿ: ಅಪಾರ ನಷ್ಟ

ಆಯಿಲ್ ಗೋದಾಮಿಗೆ ಬೆಂಕಿ: ಅಪಾರ ನಷ್ಟ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್​ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶೆಲ್ ಕಂಪನಿಗೆ ಸೇರಿದ ಆಯಿಲ್ ಉತ್ಪನ್ನಗಳನ್ನು ಗೋದಾಮಿನಲ್ಲಿ ಇರಿಸಲಾಗಿತ್ತು. ನೆಲಮಂಗಲ, ಪೀಣ್ಯ, ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಮಾರು 60 ರಿಂದ 70 ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ನಸುಕಿನ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ಸುದ್ದಿ ತಿಳಿದ ತಕ್ಷಣದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಆಯಿಲ್ ಸಂಬಂಧಿತ ಗೋದಾಮು ಆಗಿರುವ ಕಾರಣಕ್ಕೆ ಬೆಂಕಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯರಾತ್ರಿ ಸಮಯದಲ್ಲಿ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣಕ್ಕೆ ಬೆಂಕಿ ಇಡೀ ಗೋದಾಮಿಗೆ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

Category
ಕರಾವಳಿ ತರಂಗಿಣಿ