image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದ ಹಲವೆಡೆ ಇಂದಿನಿಂದ ಮತ್ತೆ ಎರಡು ದಿನ ಭಾರಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಇಂದಿನಿಂದ ಮತ್ತೆ ಎರಡು ದಿನ ಭಾರಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯಕ್ಕೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಈ ಬಾರಿ ಮೇ 28ಕ್ಕೆ ಜೇಷ್ಠ ಮಾಸ ಶುರುವಾಗಲಿದ್ದು, ಅದೇ ದಿನ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಮಾರುತಗಳು ಬಲವಾಗಿದ್ದರೆ, ಅದೇ ದಿನ ಕರ್ನಾಟಕದ ಕರಾವಳಿ ಭಾಗಕ್ಕೂ ಪ್ರವೇಶಿಸಲಿದೆ. ಮಾರುತಗಳು ದುರ್ಬಲವಾಗಿದ್ದರೆ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೇಷ್ಠ ಮಳೆ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯ ನಿರೀಕ್ಷೆ ಇದೆ. ವಾಡಿಕೆಯಂತೆ ಜೂನ್​ 1ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಅಂಡಮಾನ್ ಮತ್ತು ನಿಕೋಬಾ‌ರ್ ದ್ವೀಪದಲ್ಲಿ ಮೇ 19ರಿಂದ ಮಾನ್ಸೂನ್ ಆರಂಭಕ್ಕೆ ಈಗಾಗಲೇ ಪೂರಕ ವಾತಾವರಣ ಉಂಟಾಗಿದೆ. ಆದ್ದರಿಂದ, ಮಾನ್ಸೂನ್ ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ವ್ಯಾಪಿಸಿ, ಬೇಗನೆ ಕೇರಳ ಪ್ರವೇಶಿಸಲಿದೆ. ಈ ಬಾರಿ ಮುಂಗಾರು ಆಶಾದಾಯಕವಾಗಿರುವ ಕಾರಣ ಜೂನ್ 1ರಿಂದ ಸೆಪ್ಟೆಂಬರ್ 30ರ ವರೆಗೆ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

Category
ಕರಾವಳಿ ತರಂಗಿಣಿ