image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ : ಹೆಚ್ ಡಿ ಕೆ

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ : ಹೆಚ್ ಡಿ ಕೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ, ಕಡಿಮೆ ಸುರಿದರೆ ತೇಲುತ್ತದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರ್. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು. ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ. ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?. ಮನಸೋಇಚ್ಛೆ ಒಡೆದು ಬಡಿದು ನುಂಗಲು!?. ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು ಎಂದು ಪೋಸ್ಟ್ ಮಾಡಿದ್ದಾರೆ. ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ. ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ?. ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ?. ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ. ಹೊಸ ಶೀಶೆ, ಹಳೇ ಮದ್ಯ. ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು. ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್​ಗಳ ಬೆಂಗಳೂರು ಎಂದು ಕೇಂದ್ರ ಸಚಿವರು ಬರೆದುಕೊಂಡಿದ್ದಾರೆ.

Category
ಕರಾವಳಿ ತರಂಗಿಣಿ