image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ

ಮಂಗಳೂರು: ನಗರದಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇಂದೂ ಕೂಡ ಮಳೆ ಮುಂದುವರಿದಿದೆ. ಮಂಗಳೂರು ನಗರ ಸೇರಿದಂತೆ ಮೂಡುಬಿದಿರೆ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಭಾಗಗಳಲ್ಲಿ ಹೆಚ್ಚಿನ ಮಳೆ ಸುರಿದಿದೆ. ಮೋಡ ಮುಸುಕಿದ ವಾತಾವರಣವಿದ್ದು, ಅಲ್ಲಲ್ಲ ಚದುರಿದಂತೆ ಮಳೆ ಸುರಿದಿತ್ತು. ಕ್ಷಣ ಕಾಲ ಮಳೆ ಬಂದು ಬಳಿಕ ಬಿಸಿಲು ಬಂದಿತ್ತು. ಆದರೆ ರಾತ್ರಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೆಳಗ್ಗೆಯೂ ಮುಂದುವರಿದಿದೆ.

ಮೇ 20 ಮತ್ತು 21 ರಂದು ಕರಾವಳಿ ಕರ್ನಾಟಕ ಮತ್ತು ಪಕ್ಕದ ಘಟ್ಟದ ​​ಜಿಲ್ಲೆಗಳಲ್ಲಿ ಚದುರಿದಂತೆ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಭಾರತೀಯ ಹವಾಮಾನ ಇಲಾಖೆ ಮೇ 21ರಿಂದ 23ರವರೆಗೆ ಆರೆಂಜ್ ಮತ್ತು ರೆಡ್ ಅಲರ್ಟ್ ಮಳೆಯಾಗುವ ಸಾಧ್ಯತೆಯಿದೆ ಎಂದು ಘೋಷಿಸಿದೆ. ಆದ್ದರಿಂದ ಮೀನುಗಾರರು ಈ ಸಂದರ್ಭ ಮೀನುಗಾರಿಕೆಗೆ ತೆರಳದಂತೆ, ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. 

Category
ಕರಾವಳಿ ತರಂಗಿಣಿ