ಮೈಸೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾದ ಹಿನ್ನೆಲೆಯಲ್ಲಿ ಮುಖ್ಯಮತ್ರಿ ಸಿದ್ದರಾಮಯ್ಯ ಇಂದು ತಮ್ಮ ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸಿಕೊಂಡು ಬಂದರು. ಈ ವೇಳೆ, ತಮ್ಮನ್ನು ನೋಡಲು ಬಂದ ಜನರಿಂದ ಮಾಸ್ಕ್ ಧರಿಸಿಯೇ ಅಹವಾಲು ಸ್ವೀಕರಿಸಿದರು. ಮೈಸೂರು ಪ್ರವಾಸದಲ್ಲಿರುವ ಸಿಎಂ, ಇಂದು ತಮ್ಮ ಎರಡೇ ದಿನದ ಕಾರ್ಯಕ್ರಮಗಳಲ್ಲಿ ಎರಡು ಕಾರ್ಯಕ್ರಮಳಲ್ಲಿ ಭಾಗಿಯಾಲಿದ್ದು, ಮಧ್ಯಾಹ್ನದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ವಾಪಸ್ ಅಗಲಿದ್ದಾರೆ.
ಮೊದಲ ಸಲ ಮುಖ್ಯಮಂತ್ರಿಯಾಗಿದ್ದ ವೇಳೆ ಇಂದಿರಾ ಕ್ಯಾಂಟೀನ್ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದ್ದೆ. 2017ರಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ, ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ಗಳು ಸೊರಗಿದ್ದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದಿದ್ದರಿಂದ ಕ್ಯಾಂಟೀನ್ಗಳು ಜೀವ ಪಡೆದುಕೊಳ್ಳುತ್ತಿವೆ. ಈ ಭಾಗವಾಗಿ ಹಿನಕಲ್ನಲ್ಲೇ 8 ಇಂದಿರಾ ಕ್ಯಾಂಟೀನ್ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೇ ಹೊಸದಾಗಿ ಇನ್ನೂ 184 ಕ್ಯಾಂಟೀನ್ಗಳನ್ನು ಬೇರೆ ಬೇರೆಡೆ ಆರಂಭಿಸುತ್ತಿದ್ದೇವೆ ಎಂದರು.