image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಳಗಾವಿ -ಗೋವಾ ಹೆದ್ದಾರಿ ಬಂದ್.....

ಬೆಳಗಾವಿ -ಗೋವಾ ಹೆದ್ದಾರಿ ಬಂದ್.....

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿಯಲ್ಲಿ ಒಳ‌ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ. ಖಾನಾಪುರ ತಾಲೂಕಿನ ಕಣಕುಂಬಿ ಮಲಪ್ರಭಾ ನದಿ ಉಗಮ ಸ್ಥಾನ. ಇದೇ ಮಾರ್ಗದಲ್ಲಿ ಬರುವ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತದೆ. ಏಕಾಏಕಿ ನೀರು ಹೆಚ್ಚಳ ಆಗಿದ್ದರಿಂದ ಮಣ್ಣಿನ ರಸ್ತೆ ಕೊಚ್ಚಿ ಹೋಗಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ.

ಬೆಳಗಾವಿ - ಜಾಂಬೋಟಿ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಇದಾಗಿದೆ. ಹಳೆ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ನದಿಯಲ್ಲಿ ಮಣ್ಣಿನ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅನುವು ಮಾಡಲಾಗಿತ್ತು. ನೀರಿನ ಹರಿವು ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ರಸ್ತೆ ಕೊಚ್ಚಿ ಹೋಗಿದೆ. ನಿರ್ಮಾಣ ಹಂತದ ಸೇತುವೆ ಕೂಡ ಭಾಗಶಃ ಮುಳುಗಡೆಯಾಗಿದೆ. ಮಳೆಗಾಲ ಮುಗಿಯುವವರೆಗೂ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಬೆಳಗಾವಿ, ಖಾನಾಪುರ, ರಾಮನಗರ ಮಾರ್ಗವಾಗಿ ಸವಾರರು ಗೋವಾಗೆ ಹೋಗುತ್ತಿದ್ದಾರೆ.

Category
ಕರಾವಳಿ ತರಂಗಿಣಿ