image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಟ್ರಾಫಿಕ್ ಪೊಲೀಸರ ವಸೂಲಿ ಧಾವಂತಕ್ಕೆ ಬಲಿಯಾಯಿತಾ 3 ವರ್ಷದ ಮಗು!

ಟ್ರಾಫಿಕ್ ಪೊಲೀಸರ ವಸೂಲಿ ಧಾವಂತಕ್ಕೆ ಬಲಿಯಾಯಿತಾ 3 ವರ್ಷದ ಮಗು!

ಮಂಡ್ಯ:  ಮಂಡ್ಯ ನಗರದ ನಂದ ಸರ್ಕಲ್ ಬಳಿ  ಭಾರೀ ದುರ್ಘಟನೆ ಸಂಭವಿಸಿದ್ದು, ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರಂತ ನಡೆದಿದೆ. ಈ ಘಟನೆ ಜಿಲ್ಲೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ

ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ ನ್ನು ಅಡ್ಡಗಟ್ಟಿದ್ದಾರೆ. ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ. ಈ ವೇಳೆ ಮಗುವಿನ ತಲೆಯ ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ.

ಇದರಿಂದ ತಲೆಗೆ ಭಾರೀ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಆಕೆಯ ಮರಣದಿಂದ ಆಘಾತಕ್ಕೊಳಗಾದ ಪೋಷಕರು ರಸ್ತೆಯ ಮಧ್ಯೆ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ ದುಃಖದ ದೃಶ್ಯ ಕಟುಕನಿಗಾದರೂ ಕರುಳು ಚುರುಕು ಎನ್ನದಿರದು.

ಈ ಘಟನೆ ಬಗ್ಗೆ ಮಂಡ್ಯ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸಾರ್ವಜನಿಕರು ಪೊಲೀಸರು ತಕ್ಷಣದ ಚಿಕಿತ್ಸೆಗಾಗಿ ಹೋಗುತ್ತಿದ್ದ ಕುಟುಂಬದ ಮಹತ್ವವನ್ನು ಅರ್ಥಮಾಡಿಕೊಳ್ಳದೆ, ನಿಯಮ ಪಾಲನೆಯ ಹೆಸರಲ್ಲಿ ಜೀವವನ್ನೇ ಹರಾಜು ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

Category
ಕರಾವಳಿ ತರಂಗಿಣಿ