image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಖಡಕ್ ನಿರ್ದೇಶನ

ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಖಡಕ್ ನಿರ್ದೇಶನ

ಬೆಂಗಳೂರು: ಸಂವಿಧಾನ ವಿರೋಧಿ, ಜನವಿರೋಧಿ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವಾದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸಿಇಒಗಳಿಗೆ ಎಚ್ಚರಿಕೆ ನೀಡಿದರು.‌

ವಿಧಾನಸೌಧದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ, ಸಂವಿಧಾನ ವಿರೋಧಿ, ಜನವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾನೇರ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಠಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದರು.

ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು, ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ? ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

Category
ಕರಾವಳಿ ತರಂಗಿಣಿ