image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕಾಲ್ತುಳಿತ ಪ್ರಕರಣ ಸಂಬಂಧ ಆರ್​​ಸಿಬಿ, ಡಿಎನ್​ಎ ಸಂಸ್ಥೆಯ ನಾಲ್ವರನ್ನು ವಶಕ್ಕೆ ಪಡೆದ ಕಬ್ಬನ್ ಪಾರ್ಕ್ ಪೊಲೀಸರು

ಕಾಲ್ತುಳಿತ ಪ್ರಕರಣ ಸಂಬಂಧ ಆರ್​​ಸಿಬಿ, ಡಿಎನ್​ಎ ಸಂಸ್ಥೆಯ ನಾಲ್ವರನ್ನು ವಶಕ್ಕೆ ಪಡೆದ ಕಬ್ಬನ್ ಪಾರ್ಕ್ ಪೊಲೀಸರು

ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶೇಷಾದ್ರಿಪುರ ಉಪವಿಭಾಗದ ಎಸಿಪಿ ಪ್ರಕಾಶ್ ಅವರು ಆರ್​ಸಿಬಿ ಮ್ಯಾನೇಜ್​ಮೆಂಟ್ ಮಾರ್ಕೆಟಿಂಗ್ ವಿಭಾಗದ ನಿಖಿಲ್ ಸೋಸಲೆ, ಡಿಎನ್​ಎ ಸಂಸ್ಥೆಯ ಸುನೀಲ್ ಮ್ಯಾಥ್ಯೂ, ಕಿರಣ್ ಹಾಗೂ ಸುಮಂತ್ ಎಂಬವರನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಕ್ಟರಿ ಪರೇಡ್ ಬಗ್ಗೆ ಆರ್​​ಸಿಬಿ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಲಾಗಿತ್ತು. ಇದನ್ನು ಆಧರಿಸಿ ಮಧ್ಯಾಹ್ನದೊಳಗೆ ಲಕ್ಷಾಂತರ ಅಭಿಮಾನಿಗಳು ಜಮಾವಣೆಗೊಂಡಿದ್ದರು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಬಂಧಿಸುವಂತೆ ಸೂಚನೆ ನೀಡುತ್ತಿದ್ದಂತೆ, ಮುಂಬೈಗೆ ಹೋಗಲು ಏರ್​​ಪೋರ್ಟ್​​ಗೆ ತೆರಳಿದ್ದಾಗ ನಿಖಿಲ್​ನನ್ನು ವಶಕ್ಕೆ ಪಡೆಯಲಾಗಿದೆ‌‌. ಸ್ಟೇಡಿಯಂ ಭದ್ರತೆಯ ಹೊಣೆ ಹೊತ್ತಿದ್ದ ಡಿಎನ್​ಎ ಸಂಸ್ಥೆಯ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಎಲ್ಲ ನಾಲ್ವರನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಬಂಧನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಜೆಯೊಳಗೆ ನ್ಯಾಯಾಲಯ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸದ್ಯ ಪೊಲೀಸರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತಂದಿದ್ದಾರೆ. ಅನುಮತಿ ಪಡೆಯದಿದ್ದರೂ ಆರ್​​ಸಿಬಿ ವಿಜಯೋತ್ಸವಕ್ಕೆ ಮುಂದಾಗಿದ್ದ ಕೆಎಸ್​​ಸಿಎ ಕಾರ್ಯದರ್ಶಿ ಶಂಕರ್, ಖಜಾಂಜಿ ಜಯರಾಮ್ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ‌‌. ಅಷ್ಟೊತ್ತಿಗಾಗಲೇ ಬಂಧನ ಭೀತಿಯಿಂದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Category
ಕರಾವಳಿ ತರಂಗಿಣಿ