image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಪಠ್ಯ

ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಪಠ್ಯ

ಬೆಂಗಳೂರು: ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಪಠ್ಯ ಅಳವಡಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ಬೆಂಗಳೂರು ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಅಸ್ತು ಎಂದಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ 2 ರಿಂದ 7ನೇ ತರಗತಿಗಳು ಹಾಗೂ 9ನೇ ತರಗತಿಗೆ 2025-26ನೇ ಸಾಲಿನ ಪಠ್ಯದಲ್ಲಿ ಸಂಚಾರ ನಿಯಮಗಳ ಕುರಿತು ಅಳವಡಿಸಲು ಸಮ್ಮತಿಸಿದೆ.

ಸಂಚಾರ, ಸೂಚನಾ ಫಲಕಗಳು, ನಿಯಮಗಳು, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ರಸ್ತೆ ಸುರಕ್ಷತೆ ಎಲ್ಲರ ಸುರಕ್ಷತೆ ಹೆಸರಿನ ಅಧ್ಯಾಯಗಳನ್ನು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯೇ ಸಿದ್ಧಪಡಿಸಿದ್ದು, ಪಠ್ಯಪುಸ್ತಕ ರಚನೆ ಅಥವಾ ಪರಿಷ್ಕರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಪಠ್ಯ ಪುಸ್ತಕ ಸಂಘ ತಿಳಿಸಿದೆ.

"ನಮ್ಮ ನಿರಂತರ ಪ್ರಯತ್ನದಿಂದಾಗಿ ಸಂಚಾರ ನಿಯಮಗಳು ಮತ್ತು ಸುರಕ್ಷತೆಯ ಕುರಿತು ಶಿಕ್ಷಣ ಇಲಾಖೆಯು ಶಾಲಾ ಪಠ್ಯಕ್ರಮದಲ್ಲಿ ಸೇರಿಸಿದೆ. ರಸ್ತೆ ಸುರಕ್ಷತೆಯ ಕುರಿತು ಮಾದರಿ ಪಠ್ಯಕ್ರಮವನ್ನು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯಿಂದ ರಚಿಸಿ ಶಿಕ್ಷಣ ಇಲಾಖೆಗೆ ನೀಡಲಾಗಿದೆ" ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ