image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಶಿಕ್ಷಕರ, ಬ್ಯಾಕ್‌ಲಾಗ್‌ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಶಿಕ್ಷಕರ, ಬ್ಯಾಕ್‌ಲಾಗ್‌ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಯಾದಗಿರಿ: 'ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ, ಬ್ಯಾಕ್‌ಲಾಗ್‌ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು' ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಆರೋಗ್ಯ ಆವಿಷ್ಕಾರ' ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

'ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂಗ್ಲಿಷ್, ವಿಜ್ಞಾನ, ಗಣಿತ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಕಾರಣ ಫಲಿತಾಂಶದಲ್ಲಿಈ ಭಾಗದ ಜಿಲ್ಲೆಗಳು 30, 31, 32, 33, 34, 35 ಸ್ಥಾನ ಪಡೆಯುತ್ತಿವೆ. ಅಲ್ಲದೇ ಬ್ಯಾಕ್‌ಲಾಗ್‌ ಹುದ್ದೆಗಳೂ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಉಳಿದಿರುವುದರಿಂದ ಈ ಭಾಗ ಹಿಂದುಳಿದಿದೆ. ಹೀಗಾಗಿ ಕೂಡಲೇ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು' ಎಂದು ಖರ್ಗೆ ಅವರು ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದರು.

“ಈ ಪ್ರದೇಶದಲ್ಲಿ ಉದ್ಯೋಗ ನೇಮಕಾತಿಗೆ 371 (ಜೆ) ಕಾಯ್ದೆಯಲ್ಲಿ ಹಣಕಾಸು ಇಲಾಖೆಯ ಅನುಮೋದನೆ ಪಡೆಯುವ ಅವಶ್ಯಕತೆ ಇಲ್ಲ. ಹೀಗಾಗಿ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ಸ್ಥಳೀಯವರಿಗೆ ಉದ್ಯೋಗ ನೀಡುವತ್ತ ಗಮನಹರಿಸಬೇಕು' ಎಂದರು.

Category
ಕರಾವಳಿ ತರಂಗಿಣಿ