image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹೃದಯಾಘಾತದ ಸಾವು ಮತ್ತು ಕೊರೋನಾ ಲಸಿಕೆಗೆ ಯಾವುದೇ ಸಂಬಂಧ ಇಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ

ಹೃದಯಾಘಾತದ ಸಾವು ಮತ್ತು ಕೊರೋನಾ ಲಸಿಕೆಗೆ ಯಾವುದೇ ಸಂಬಂಧ ಇಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ

ನವದೆಹಲಿ: ಹೃದಯಾಘಾತದ ಸಾವು ಮತ್ತು ಕೊರೋನಾ ಲಸಿಕೆಗೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಹಲವು ವೈಜ್ಞಾನಿಕ ಅಧ್ಯಯನಗಳು ಸಾಬೀತು ಮಾಡಿವೆ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಕೋವಿಡ್ ಲಸಿಕೆಯನ್ನು ಆತುರದ ಅನುಮೋದನೆಯೊಂದಿಗೆ ಸಾರ್ವಜನಿಕರಿಗೆ ವಿತರಣೆ ಮಾಡಿದ್ದು ಕೂಡ ಈ ಸಾವುಗಳಿಗೆ ಕಾರಣವಾಗಿರಬಹುದು ಎಂದು ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು. ಸಿಎಂ ಹೇಳಿಕೆ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಹಠಾತ್​ ಆಗಿ ಸಂಭವಿಸುತ್ತಿರುವ ಸಾವುಗಳ ಬಗ್ಗೆ ದೇಶದ ಹಲವಾರು ಆರೋಗ್ಯ ಸಂಸ್ಥೆಗಳು ತನಿಖೆ ಮಾಡಿವೆ. ಇದರಲ್ಲಿ ಅಂತಹ ಯಾವುದೇ ಅಂಶವಿಲ್ಲ ಎಂದು ಹೇಳಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ನಡೆಸಿದ ಅಧ್ಯಯನಗಳಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿವೆ. ಲಸಿಕೆಯಿಂದ ಗಂಭೀರ ಅಡ್ಡಪರಿಣಾಮ ಉಂಟಾಗಿದ್ದು ಅಪರೂಪ. ಹೀಗಾಗಿ, ಹೃದಯಾಘಾತಕ್ಕೂ- ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹೃದಯಾಘಾತಕ್ಕೆ ಹಲವು ಕಾರಣಗಳಿವೆ. ಜೀವನಶೈಲಿ, ವಂಶವಾಹಿ, ಈ ಮೊದಲಿರುವ ಆರೋಗ್ಯ ಸಂಬಂಧಿ ಕಾಯಿಲೆಗಳು, ಕೋವಿಡ್ ನಂತರದ ಸಮಸ್ಯೆಗಳು ಸೇರಿದಂತೆ ವ್ಯಾಪಕ ಅಂಶಗಳು ಹಠಾತ್ ಸಾವು ಉಂಟಾಗಿರಬಹುದು ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ. 18 ರಿಂದ 45 ರ ಪ್ರಾಯದ ಯುವಜನರಲ್ಲಿ ವಿವರಿಸಲಾಗದ ಹಠಾತ್ ಸಾವುಗಳ ಹಿಂದಿನ ಕಾರಣಗಳನ್ನು ತಿಳಿಯಲು ಐಸಿಎಂಆರ್ ಮತ್ತು ಎನ್‌ಸಿಡಿಸಿ ಅಧ್ಯಯನ ನಡೆಸುತ್ತಿವೆ. ಕೋವಿಡ್-19 ಲಸಿಕೆಯು ಯುವಕರಲ್ಲಿ ಹಠಾತ್ ಸಾವಿನ ಅಪಾಯ ಸೃಷ್ಟಿಸುವುದಿಲ್ಲ ಎಂದು ಸಂಶೋಧನೆಗಳು ನಿರ್ಣಯಿಸಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹೃದಯಾಘಾತದ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎಂಬ ಹೇಳಿಕೆಗಳು ಸುಳ್ಳು, ದಾರಿತಪ್ಪಿಸುವ ಮತ್ತು ವೈಜ್ಞಾನಿಕವಾಗಿ ಸಾಬೀತಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Category
ಕರಾವಳಿ ತರಂಗಿಣಿ