image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಐದೇ ನಿಮಿಷದಲ್ಲಿ ಪ್ರಧಾನ ಮಂತ್ರಿಗಳಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ : ಹೆಚ್.ಡಿ.ಕೆ

ಐದೇ ನಿಮಿಷದಲ್ಲಿ ಪ್ರಧಾನ ಮಂತ್ರಿಗಳಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ : ಹೆಚ್.ಡಿ.ಕೆ

ಮೈಸೂರು : ನಾನು ಐದೇ ನಿಮಿಷದಲ್ಲಿ ಪ್ರಧಾನ ಮಂತ್ರಿಗಳಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ. ಆದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಶಕ್ತಿಯಿದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿಂದು ದಿಶಾ ಸಭೆಗೆ ಭಾಗವಹಿಸಲು ಆಗಮಿಸಿದ್ದ ವೇಳೆ ಜಿಲ್ಲಾ ಪಂಚಾಯತ್‌ ಕಚೇರಿಯ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಹಳೆಯ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್​​ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿಯಿಲ್ಲ, ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಲು ಸಾಧ್ಯವಿಲ್ಲ. ಇಲ್ಲದಿದ್ದರೆ ಇಂತಹ ಪರಿಸ್ಥಿತಿಯಲ್ಲಿ ಮೇಕೆದಾಟು ಯೋಜನೆ ಕಾಂಗ್ರೆಸ್​​ನಿಂದ ಜಾರಿಯಾಗಲು ಸಾಧ್ಯವಿಲ್ಲ ಎಂದರು.

ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಜಾರಿ ಮಾಡಲು ಕಚೇರಿ ತೆರೆದರೆ ಏನೂ ಪ್ರಯೋಜನವಿಲ್ಲ. ಈಗ ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್​​ನವರು. ಜಾರಿ ಮಾಡದೆ ಎರಡು ವರ್ಷದಿಂದ ಸುಮ್ಮನಿದ್ದು, ಈಗ ನನ್ನ ಮೇಲೆ ಜವಾಬ್ಧಾರಿ ಹೊರಿಸುತ್ತಿದ್ದಾರೆ. ನಾನು ಹೇಗೆ ಮಾಡಲಿ. ಮೊದಲು ತಮ್ಮ ತಮಿಳುನಾಡಿನ ಮಿತ್ರಪಕ್ಷ ಒಪ್ಪಿಸಲಿ. ಐದೇ ನಿಮಿಷದಲ್ಲಿ ಪ್ರಧಾನ ಮಂತ್ರಿಗಳಿಂದ ಮೇಕೆದಾಟು ಯೋಜನೆಗೆ ನಾನು ಒಪ್ಪಿಗೆ ಕೊಡಿಸುತ್ತೇನೆ ಎಂದು ಹೆಚ್​ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಆರ್​​ಎಸ್​​ಎಸ್‌ ಬಂದ್‌ ಮಾಡುವ ವಿಚಾರವಾಗಿ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೊದಲು 40 ವರ್ಷಗಳಿಂದ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದೀರಿ ಎಂಬುದನ್ನು ಮೊದಲು ಹೇಳಿ. ನೀವು ಆರ್​​ಎಸ್​ಎಸ್​ ಬಂದ್‌ ಮಾಡುವುದು ಇರಲಿ, ಎಲ್ಲ ಕಡೆ ಕಾಂಗ್ರೆಸ್‌ ಬಂದ್‌ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್​ನ್ನು ಬ್ಯಾನ್‌ ಮಾಡುತ್ತಿದ್ದಾರೆ. ಮೊದಲು ಕಾಂಗ್ರೆಸ್‌ ಅಸ್ತಿತ್ವ ಉಳಿಸಿಕೊಳ್ಳಲಿ. ಬಾಯಿ ಚಪಲಕ್ಕೆ ಹಾಗೂ ವಿಚಾರಗಳನ್ನ ಮರೆಮಾಚಲು ಈ ರೀತಿ ಹೇಳಿಕೆ ಕೊಡಬಾರದು ಎಂದು ಟೀಕಿಸಿದರು.

Category
ಕರಾವಳಿ ತರಂಗಿಣಿ