image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ : ಬಿ ಜೆ ಪಿ ರೆಬೆಲ್ಸ್

ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ : ಬಿ ಜೆ ಪಿ ರೆಬೆಲ್ಸ್

ಹಾಸನ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಉದ್ದೇಶದಿಂದ ಬಿಜೆಪಿ ರೆಬೆಲ್ಸ್ ತಂಡ ಜಿಲ್ಲೆಗೆ ಭೇಟಿ ನೀಡಿದೆ. ಮಧ್ಯಾಹ್ನ ಆಗಮಿಸಿದ ತಂಡವು ಆಲೂರು ತಾಲೂಕಿನ ವಾಟೆಪುರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿತು. ಶಾಸಕ ಬಿ.ಪಿ. ಹರೀಶ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಮತ್ತು ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ಅವರನ್ನೊಳಗೊಂಡ ಈ ತಂಡವು, ವಾಟೆಪುರ ಎಸ್ಟೇಟ್‌ನಲ್ಲಿನ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.

ಸ್ಥಳೀಯ ಕಾರ್ಮಿಕರು, ಹೊರ ರಾಜ್ಯದ ಕಾರ್ಮಿಕರಿಂದ ನಮಗೆ ಉದ್ಯೋಗಾವಕಾಶಗಳು ಕಡಿಮೆಯಾಗಿರುವ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಬಳಿಕ ತಂಡವು ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ಮತ್ತು ಕುಂಬ್ರಹಳ್ಳಿ ಗ್ರಾಮಗಳಿಗೆ ಭೇಟಿ ನೀಡಲಿದ್ದು, ಅಕ್ರಮ ನುಸುಳುಕೋರರ ಮಾಹಿತಿ ಸಂಗ್ರಹಿಸಲಿದೆ.ಆಲೂರು ತಾಲೂಕಿನ ವಾಟೆಪುರದಲ್ಲಿ ಮಾಜಿ ಸಚಿವ ಕುಮಾರ ಬಂಗಾರಪ್ಪ, ಅರವಿಂದ ಲಿಂಬಾವಳಿ, ಶಾಸಕ ಬಿ.ಪಿ. ಹರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ವಿರುದ್ಧ ರಾಜ್ಯಾದ್ಯಂತ ತೀವ್ರ ಅಭಿಯಾನ ನಡೆಯುತ್ತಿದ್ದು, ಅಕ್ರಮ ಬಾಂಗ್ಲಾದೇಶಿಗರನ್ನು ಗುರುತಿಸಿ, ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಮೂರು ತಿಂಗಳ ಹಿಂದೆ ವಾರ್ ರೂಂ ಆರಂಭಿಸಿದ್ದು, 3,500 ದೂರುಗಳು ಸ್ವೀಕಾರವಾಗಿವೆ. ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಬಿಜಾಪುರ ಜಿಲ್ಲೆಗಳಲ್ಲಿ ಇವರ ಸಂಖ್ಯೆ ಹೆಚ್ಚಾಗಿದೆ. ನಕಲಿ ಆಧಾರ್ ಕಾರ್ಡ್‌ಗಳನ್ನು ವೆಸ್ಟ್ ಬೆಂಗಾಲ್, ಅಸ್ಸಾಂ, ದೆಹಲಿಯಿಂದ ತಯಾರಿಸಿಕೊಂಡಿದ್ದಾರೆ. ಕಾಫಿ ಎಸ್ಟೇಟ್, ಮನೆಗೆಲಸ, ವ್ಯಾಪಾರದಲ್ಲಿ ಸೇರಿಕೊಂಡಿರುವ ಇವರು ಸ್ಥಳೀಯರ ಉದ್ಯೋಗ ಕಸಿದುಕೊಳ್ಳುತ್ತಿದ್ದಾರೆ. ಅಕ್ರಮ ಬಾಂಗ್ಲಾದೇಶಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

Category
ಕರಾವಳಿ ತರಂಗಿಣಿ