ಬೆಂಗಳೂರು : ಸರ್ಕಾರಿ ನೌಕರರಿಗೆ OPS ಜಾರಿಗೆ ಬಗ್ಗೆ ಸಮಿತಿ ವರದಿ ಬಂದ ಬಳಿಕ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಆ ಮೂಲಕ ಒಪಿಎಸ್ ಜಾತಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗರ ಗುಡ್ ನ್ಯೂಸ್ ನೀಡಲಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ನನ್ನನ್ನು ಭೇಟಿ ಮಾಡಲು ಪ್ರತಿದಿನವೂ ಶಾಸಕರು ಬರುತ್ತಿರುತ್ತಾರೆ. ಪ್ರತಿದಿನವನ್ನೂ ಶಾಸಕರಿಗೆ ಮೀಸಲಾಗಿ ಇಟ್ಟಿದ್ದೇನೆ. ಬೆಂಗಳೂರನ್ನು ಐದು ಹೋಳು ಮಾಡಿ ಓಳು ಬಿಡುತ್ತಿದ್ದಾರೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ಬಗ್ಗೆ ಈಗಾಗಲೇ ಸದನದಲ್ಲಿ ಮಾತನಾಡಿದ್ದೇವೆ. ಎಲ್ಲರ ಬಳಿಯೂ ಇದರ ಬಗ್ಗೆ ಮಾತನಾಡಿಯೇ ತೀರ್ಮಾನ ತೆಗೆದುಕೊಂಡಿದ್ದೇವೆ. ಆದರೂ ಅವರು ರಾಜಕೀಯ ಮಾಡಬೇಕಲ್ಲ ಎಂದು ಮಾತನಾಡುತ್ತಿದ್ದಾರೆ ಎಂದರು.
ಬಿಬಿಎಂಪಿ, ವಿದ್ಯುತ್ ಸಂಪರ್ಕ, ಬಿ ಖಾತಾ ವಿಚಾರಗಳ ಬಗ್ಗೆ ಒಂದಷ್ಟು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತೇನೆ. ನಾನು ಯಾವುದಕ್ಕೂ ಉತ್ತರ ನೀಡದೆ ಓಡಿ ಹೋಗುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಒಂದಷ್ಟು ತೀರ್ಮಾನ ಮಾಡುತ್ತಿದ್ದೇವೆ. ಎಲ್ಲದಕ್ಕೂ ಉತ್ತರ ನೀಡುತ್ತೇವೆ ಎಂದರು. ಧರ್ಮಸ್ಥಳ ಸರಣಿ ಸಾವುಗಳ ಬಗ್ಗೆ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ನನಗೆ ಇನ್ನೂ ಸರಿಯಾದ ಮಾಹಿತಿ ಲಭ್ಯವಿಲ್ಲ. ಗೃಹಸಚಿವರ ಬಳಿ ಇದರ ಬಗ್ಗೆ ಮಾತನಾಡಿ ಮಾಹಿತಿ ಪಡೆಯುತ್ತೇನೆ. ಎಲ್ಲ ವಿಚಾರಗಳಿಗೂ ಬಾಯಿ ಹಾಕುವುದು ಸೂಕ್ತವಲ್ಲ ಎಂದರು. ಮೈಸೂರು ಕಾರ್ಯಕ್ರಮದಲ್ಲಿ ಸಿಎಂ ನಿಮಗೆ ಅಪಮಾನ ಮಾಡಿದರು ಎನ್ನುವ ವರದಿಗಳ ಬಗ್ಗೆ ಮಾತನಾಡಿ, ಈಗಾಗಲೇ ಇದರ ಬಗ್ಗೆ ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿಗಳೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ ಎಂದು ತಿಳಿಸಿದರು. ಎರಡು ದಿನ ಕನಕಪುರ ಕ್ಷೇತ್ರದ ಜನರಿಗೆ ನಾನು ಸಮಯ ನೀಡಲು ಆಗುತ್ತಿಲ್ಲ. ಅದಕ್ಕೆ ಎರಡು ದಿನ ಅಲ್ಲಿಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತೇನೆ ಎಂದು ಹೇಳಿದರು.