image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೊಟೀಸ್‌ ನೀಡುವಲ್ಲಿ ನಮ್ಮ ಪಾತ್ರ ಇಲ್ಲ : ಕೇಂದ್ರ ಸರಕಾರ

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೊಟೀಸ್‌ ನೀಡುವಲ್ಲಿ ನಮ್ಮ ಪಾತ್ರ ಇಲ್ಲ : ಕೇಂದ್ರ ಸರಕಾರ

ಬೆಂಗಳೂರು : ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್'ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್‌ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ. GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್‌ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿ ಎಸ್ ಟಿ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ.

Category
ಕರಾವಳಿ ತರಂಗಿಣಿ