image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ PDS ಗೆ ಅನುದಾನಕ್ಕಾಗಿ ಮನವಿ ಮಾಡಿದ ಸಚಿವ ಕೆ.ಹೆಚ್.ಮುನಿಯಪ್ಪ,

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ PDS ಗೆ ಅನುದಾನಕ್ಕಾಗಿ ಮನವಿ ಮಾಡಿದ ಸಚಿವ ಕೆ.ಹೆಚ್.ಮುನಿಯಪ್ಪ,

ಬೆಂಗಳೂರು: ಕರ್ನಾಟಕದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು (PDS) ಆಧುನಿಕರಿಸಲು ಸರ್ಕಾರ ಸ್ಮಾರ್ಟ್ ಪಿಡಿಎಸ್ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಮಾರ್ಟ್ ಪಿಡಿಎಸ್ ಜಾರಿಗೆ ಬೇಕಾಗಿರುವ ಮೂಲಸೌಕರ್ಯಗಳ ಸ್ಥಾಪನೆ ಹಾಗೂ ನಿರ್ವಹಣೆಗೆ ₹35 ಕೋಟಿ ಅನುದಾನವನ್ನು ನೀಡಲು ಕೇಂದ್ರ ಸರ್ಕಾರಕ್ಕೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾದ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಈ ಬಗ್ಗೆ ಮನವಿ ಮಾಡಿದ್ದಾರೆ. ಸ್ಮಾರ್ಟ್ ಪಿಡಿಎಸ್ ಯೋಜನೆಯಡಿ, ಅಂಗಡಿಗಳಲ್ಲಿ ಇಲೆಕ್ಟ್ರಾನಿಕ್ ತೂಕದ ಯಂತ್ರಗಳು (EWS) ಹಾಗೂ ಪಾಯಿಂಟ್ ಆಫ್ ಸೇಲ್ (PoS) ಸಾಧನಗಳ ಏಕೀಕರಣವನ್ನು ಜಾರಿಗೊಳಿಸುವುದು ಮುಖ್ಯ ಉದ್ದೇಶವಾಗಿದೆ. ಈ ಕ್ರಮವು ಪಿಡಿಎಸ್ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಸೇವೆಗಳ ಮಾರ್ಗವಾಗಿ ಸಹಕಾರಿಯಾಗಲಿದೆ.

ಭಾರತ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ ₹21 ಸಬ್ಸಿಡಿಯನ್ನು ರಾಜ್ಯಗಳಿಗೆ ನೀಡುವ ಮೂಲಕ ಈ ಯೋಜನೆಗೆ ಬಲ ನೀಡುತ್ತಿದೆ. ಆದರೆ, ಈ ಮೊತ್ತವನ್ನು ಚಿಲ್ಲರೆ ಆಯುಕ್ತದ ಭಾಗವಾಗಿ ಪರಿಗಣಿಸಲಾಗುತ್ತಿದೆ ಎಂಬ ಅಸಮಾಧಾನವನ್ನು ಅಂಗಡಿ ಡೀಲರ್‌ಗಳ ಸಂಘ ವ್ಯಕ್ತಪಡಿಸಿದೆ. ನಿಜವಾದ ತಾಂತ್ರಿಕ ವೆಚ್ಚ ಮತ್ತು ನಿರ್ವಹಣೆಗೆ ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ತಾಂತ್ರಿಕ ಸಹಾಯದ ಕೊರತೆ ಹಾಗೂ ನಿರ್ವಹಣಾ ಸವಾಲುಗಳನ್ನು ನಿಭಾಯಿಸಲು, ಡೀಲರ್‌ಗಳ ಸಂಘವು ಈ ಕಾರ್ಯವಿಧಾನವನ್ನು ಕೇಂದ್ರಿಕೃತ ರೀತಿಯಲ್ಲಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯವು ₹35 ಕೋಟಿ ಮೊತ್ತದ ಅನುದಾನಕ್ಕಾಗಿ ಕೇಂದ್ರ ಆಹಾರ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಈ ಅನುದಾನದಿಂದ FIST ಸಾಫ್ಟ್‌ವೇರ್‌ನ ಪರಿಣಾಮಕಾರಿ ಜಾರಿಗೆ, ಸಾಧನಗಳ ಖರೀದಿ, ನಿರ್ವಹಣೆ ಹಾಗೂ ರಾಜ್ಯದಾದ್ಯಂತ ಪಿಡಿಎಸ್ ವ್ಯವಸ್ಥೆಯ ಸಮರ್ಥೀಕರಣಕ್ಕೆ ಸಹಕಾರವಾಗಲಿದೆ ಎಂದು ಸಚಿವರು ಕೋರಿದ್ದಾರೆ. ಆಹಾರ ಭದ್ರತಾ ಕಾಯ್ದೆಯಡಿ (NFSA) ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿಪಡಿಸಿರುವ ಫಲಾನುಭವಿಗಳ ಗರಿಷ್ಠ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ ಸಲ್ಲಿಸಿದ್ದಾರೆ.

Category
ಕರಾವಳಿ ತರಂಗಿಣಿ