image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯ ಚುನಾವಣಾ ಆಯೋಗ ವಿರುದ್ಧ ರಾಹುಲ್ ಪ್ರತಿಭಟನೆ : ಕೈಲಾಗದವ ಪರಚಿ ಕೊಂಡ ಎಂದು ವ್ಯಂಗ್ಯವಾಡಿದ ಆರ್ ಅಶೋಕ್

ರಾಜ್ಯ ಚುನಾವಣಾ ಆಯೋಗ ವಿರುದ್ಧ ರಾಹುಲ್ ಪ್ರತಿಭಟನೆ : ಕೈಲಾಗದವ ಪರಚಿ ಕೊಂಡ ಎಂದು ವ್ಯಂಗ್ಯವಾಡಿದ ಆರ್ ಅಶೋಕ್

ಬೆಂಗಳೂರು : ಕೈ'ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್‌ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ ಎಂದು ವಿರೋಧ ಪಕ್ಷ ನಾಯಕ ಆ‌ರ್.ಅಶೋಕ ವಾಗ್ದಾಳಿ ನಡೆಸಿದರು. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅಶೋಕ, ' ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್‌ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ದಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ' ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ?. ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಎಂದು ಪ್ರಶ್ನಿಸಿದ್ದಾರೆ.

ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ. ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ಈಗ ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ್ಮ ವೈಫಲ್ಯ ತೆಗೆದುಕೊಳ್ಳೋಕೆ anticipatory bail ತೆಗೆದುಕೊಳ್ಳಲು ಬರುತ್ತಿದ್ದೀರಲ್ಲ, ನಿಮ್ಮ ಕಾಂಗ್ರೆಸ್‌ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ! ಎಂದಿದ್ದಾರೆ.

Category
ಕರಾವಳಿ ತರಂಗಿಣಿ