image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಚಿಂತನೆ: ಸಚಿವ ವಿ.ಸೋಮಣ್ಣ

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಚಿಂತನೆ: ಸಚಿವ ವಿ.ಸೋಮಣ್ಣ

ಬೆಳಗಾವಿ: "ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ" ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲನ್ನು ಸ್ವಾಗತಿಸಲು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

"ಕೊಂಕಣ ರೈಲ್ವೆ ಜಾಲ ಕೇರಳದಿಂದ ಮಹಾರಾಷ್ಟ್ರದವರೆಗೆ ವಿಸ್ತರಿಸಿದೆ. ಹಾಗಾಗಿ, ಪ್ರಯಾಣಿಕರಿಗೆ ಇನ್ನೂ ಉತ್ತಮ ಸೇವೆ ಕಲ್ಪಿಸುವ ಉದ್ದೇಶದಿಂದ ಇದನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಆಲೋಚನೆ ಮಾಡುತ್ತಿದ್ದೇವೆ. ಆ ನಿಟ್ಟಿನಲ್ಲಿ ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದು, ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ಬಳಿಕ ವಿಲೀನ ಪ್ರಕ್ರಿಯೆಯನ್ನು ಶುರು ಮಾಡಲಾಗುವುದು" ಎಂದರು.

ಇದೆ ಸಂಧರ್ಭ ಪುಣೆಯಿಂದ ವಂದೇ ಭಾರತ್ ರೈಲು ಬೆಳಗಾವಿಗೆ ಬರುತ್ತಿದ್ದಂತೆ ಚಪ್ಪಾಳೆ ತಟ್ಟಿ ಕುಂದಾನಗರಿ ಬೆಳಗಾವಿ ಜನತೆ ಅದ್ಧೂರಿಯಾಗಿ ಸ್ವಾಗತಿಸಿದರು. ಜೈ ಶ್ರೀರಾಮ್​, ಜೈ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಸಚಿವ ವಿ.ಸೋಮಣ್ಣ, ಸಂಸದ ಜಗದೀಶ್ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಸವಿತಾ ಕಾಂಬಳೆ, ಮಾಜಿ ಸಂಸದೆ ಮಂಗಲ ಅಂಗಡಿ ಇದ್ದರು.

Category
ಕರಾವಳಿ ತರಂಗಿಣಿ