ಮಂಗಳೂರು : ನಟ, ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲುರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಮಾಡಲಾಗಿದೆ. ದಿವಂಗತ ನಟ ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಬಹು ದಿನಗಳ ಅಭಿಮಾನಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತೆ ಆಗಿದೆ. ನಟ ವಿಷ್ಣುವರ್ಧನ್ ಜೊತೆಗೆ ನಟಿ ಬಿ ಸರೋಜ ದೇವಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ರಾಷ್ಟ್ರ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಸಂಪುಟ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ ಮಾಡಿದೆ. ಅಂದಹಾಗೇ ಕೆಲ ದಿನಗಳ ಹಿಂದೆಯಷ್ಟೇ ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸ್ಯಾಂಡಲ್ ವುಡ್ ಹಿರಿಯ ನಟಿಯರು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದರು. ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯವರು ಮನವಿ ಮಾಡಿದ್ರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ನಟ ವಿಷ್ಣುವರ್ಧನ್, ನಟಿ ಬಿ ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ.